February 2, 2026

ಮಂಗಳೂರು: ವಿಮಾನ ನಿಲ್ದಾಣದಲ್ಲಿ 16.79 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ: ಕಾಸರಗೋಡು ಮೂಲದ ವ್ಯಕ್ತಿ ವಶಕ್ಕೆ

0
image_editor_output_image1348662285-1639541411795

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ತೆರಿಗೆ ವಂಚಿಸಿ ಅಕ್ರಮವಾಗಿ ಸಾಗಿಸುತ್ತಿದ್ದ 16.79 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿರುವ ಕಸ್ಟಮ್ಸ್ ಅಧಿಕಾರಿಗಳು ಒಬ್ಬನನ್ನು ಬಂಧಿಸಿದ್ದಾರೆ.

ಕಾಸರಗೋಡಿನ ವ್ಯಕ್ತಿಯೊಬ್ಬ ಶಾರ್ಜಾದಿಂದ 16,79,860 ರೂ . ಮೌಲ್ಯದ 24 ಕ್ಯಾರೆಟ್‌ನ 338 ಗ್ರಾಂ ಚಿನ್ನವನ್ನು ಸಾಗಾಟ ಮಾಡುತ್ತಿದ್ದ. ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.

ಆರೋಪಿ ಸ್ಟಿರಿಯೋ ಕೇಬಲ್ , ಬರ್ನರ್ ಸ್ಟ್ಯಾಂಡ್ , ಕ್ಯಾಂಡಲ್ ಹೋಲ್ಡರ್ ಸ್ಟ್ಯಾಂಡ್‌ಗಳಲ್ಲಿಟ್ಟು ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!