August 14, 2026

ಪೊಲೀಸ್ ಆಯುಕ್ತರನ್ನು ಭೇಟಿಯಾದ ಕೃಷ್ಣಾಪುರದ SSF SYS ಹಾಗೂ ಕರ್ನಾಟಕ ಮುಸ್ಲಿಂ ಜಮಾಅತ್ ನಾಯಕರ ನಿಯೋಗ

0
IMG-20241015-WA0001.jpg

ಮಂಗಳೂರು: ಜಿಲ್ಲೆಯ ಮುಸ್ಲಿಂ ಮುಂದಾಳುವಾಗಿದ್ದ ಮುಮ್ತಾಝ್ ಅಲಿಯವರ ಆಕಾಲಿಕ ಮರಣಕ್ಕೆ ಕಾರಣರಾದ ಎಲ್ಲಾ ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಒತ್ತಾಯಿಸಿ ಕೃಷ್ಣಾಪುರದ ಸುನ್ನೀ ಸಂಘಟನೆಗಳ ಮುಖಂಡರು ಮಂಗಳೂರು ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಿ ಅವರ ಸಾವಿನ ಹಿಂದಿರುವ ಎಲ್ಲಾ ಆರೋಪಿಗಳನ್ನು ಬಂಧಿಸಿ, ಮುಂದೆ ಇಂತಹ ಘಟನೆಗಳು ನಡೆಯದೇ ಇರಲು ಯಾವುದೇ ಪ್ರಭಾವಕ್ಕೂ ಮಣಿಯದೆ ಆರೋಪಿಗಳಿಗೆ ಗರಿಷ್ಟ ಶಿಕ್ಷೆಯನ್ನು ನೀಡಬೇಕಾಗಿಯೂ ಮನವಿಯಲ್ಲಿ ಕೋರಲಾಗಿದೆ.

ಈ ಸಂದರ್ಭದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಕೃಷ್ಣಾಪುರ ಸರ್ಕಲ್ ಇದರ ಅಧ್ಯಕ್ಷರಾದ ಮುಹಮ್ಮದ್ ಅಲಿ, SSF ಕೃಷ್ಣಾಪುರ ಸೆಕ್ಟರ್ ಅಧ್ಯಕ್ಷ ನೌಫಲ್ ಶಾ, ಪ್ರಧಾನ ಕಾರ್ಯದರ್ಶಿ ಶಫೀಕ್ ಕೃಷ್ಣಾಪುರ, ಸುರತ್ಕಲ್ ಡಿವಿಷನ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಅಫ್ರೀದ್ ಕೃಷ್ಣಾಪುರ, ಕರ್ನಾಟಕ ಮುಸ್ಲಿಂ ಜಮಾಅತ್ ಫೈನಾನ್ಸ್ ಕಾರ್ಯದರ್ಶಿ ಅಬ್ದುಲ್ ಅಝೀಝ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!