August 14, 2026

ಉಡುಪಿ ಜಿಲ್ಲೆಯಾದ್ಯಂತ ಎರಡು ದಿನ ಮದ್ಯ ಮಾರಾಟ ನಿಷೇಧ: ಜಿಲ್ಲಾಧಿಕಾರಿ ಆದೇಶ

0
image_editor_output_image-1657706634-1728967683459.jpg

ಉಡುಪಿ: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿರುವ ಕಾರಣದಿಂದ ಎರಡು ದಿನಗಳ ಕಾಲ ಉಡುಪಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಡಾ ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ.

ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಉಪ ಚುನಾವಣೆಯ ಪ್ರಯುಕ್ತಅ. 21 ರಂದು ಮತದಾನ ಹಾಗೂ ಅ. 24 ರಂದು ಮತ ಎಣಿಕೆ ನಡೆಯಲಿದೆ.
ಸಾರ್ವಜನಿಕ ಹಿತದೃಷ್ಟಿಯಿಂದ ಶಾಂತಿಪಾಲನೆ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ಮತದಾನ ಪ್ರಾರಂಭವಾಗುವ ದಿನಾಂಕಕ್ಕಿಂತ 48 ಗಂಟೆಗಳ ಮುಂಚಿತವಾಗಿ ಅ. 19 ರ ಸಂಜೆ 4 ಗಂಟೆಯಿಂದ ಅ. 21 ರ ಸಂಜೆ 4 ಗಂಟೆಯ ವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಹೇರಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!