ಉಪ್ಪಿನಂಗಡಿ: ಪೆರಿಯಡ್ಕದಲ್ಲಿ ಕಳ್ಳನ ಚಟುವಟಿಕೆ ಸಿಸಿ ಕ್ಯಾಮರಾದಲ್ಲಿ ಸೆರೆ
ಉಪ್ಪಿನಂಗಡಿ: ಕಳ್ಳನೊಬ್ಬನ ಚಟುವಟಿಕೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ ಘಟನೆ ಭಾನುವಾರ ರಾತ್ರಿ ಉಪ್ಪಿನಂಗಡಿ ಸಮೀಪ ಪೆರಿಯಡ್ಕದಲ್ಲಿ ನಡೆದಿದೆ.
ಕಳೆದ ಕೆಲವು ಸಮಯದಿಂದ ಈ ಭಾಗದ ಮನೆಗಳಲ್ಲಿ ಕಳ್ಳತನದ ಪ್ರಕರಣಗಳು ನಡೆದಿದ್ದು, ಈ ಬಗ್ಗೆ ಪೊಲೀಸರಿಗೂ ದೂರು ನೀಡಲಾಗಿತ್ತು. ಆದರೆ ಕಳ್ಳನ ಪತ್ತೆ ಮಾತ್ರ ನಡೆದಿಲ್ಲ.
ನಡುವೆ ಕಳ್ಳತನಕ್ಕಾಗಿ ರಾತ್ರಿ ಹೊಂಚು ಹಾಕುತ್ತಿದ್ದ ವ್ಯಕ್ತಿಯೊಬ್ಬನ ಚಟುವಟಕೆ ಸಿಸಿ ಕ್ಯಾಮರಾದಲ್ಲಿ ಪತ್ತೆಯಾಗಿದ್ದು, ಇದರಿಂದ ಇಲ್ಲಿನ ಜನರು ಆತಂಕಗೊಂಡಿದ್ದಾರೆ. ಪೆರಿಯಡ್ಕ ಸಹಕಾರಿ ಸಂಘದ ಶಾಖಾ ಕಟ್ಟಡದ ಮುಂಭಾಗದಲ್ಲಿ ಈತ ಕಾಣಿಸಿಕೊಂಡಿದ್ದಾನೆ. ಇಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾದಲ್ಲಿ ಇದು ದಾಖಲಾಗಿದೆ. ಈ ಸಂದರ್ಭ ಸ್ಥಳೀಯ ಕೆಲ ಯುವಕರು ಈತನ ಚಲನವಲನವನ್ನು ದೂರದಿಂದ ನೋಡಿದ್ದಾರೆ. ಬಳಿಕ ಅವರು ಹತ್ತಿರ ಬರುತ್ತಿದ್ದಂತೆ ಪರಾರಿಯಾಗಿದ್ದಾನೆ.




