ಉಪ್ಪಿನಂಗಡಿ: ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್: 50ಕ್ಕಿಂತಲೂ ಅಧಿಕ ಮಂದಿಗೆ ಗಂಭೀರ ಗಾಯ
ಉಪ್ಪಿನಂಗಡಿ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಮೀಪದ ಉಪ್ಪಿನಂಗಡಿಯ ಹಳೇಗೇಟು ಎಂಬಲ್ಲಿ ಹಸಿ ಮೀನು ಸ್ಟಾಲ್ ನಲ್ಲಿ ಹಿಂದೂ ಸಂಘಟನೆಯ ಮುಖಂಡರ ಮೇಲೆ ನಡೆದ ತಲ್ವಾರು ದಾಳಿಗೆ ಸಂಬಂಧಿಸಿ ಡಿ.14 ರಂದು ಬೆಳಿಗ್ಗೆ ಮೂವರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ಠಾಣೆಯಲ್ಲಿರಿಸಿದ ಘಟನೆಗೆ ಸಂಬಂಧಿಸಿದಂತೆ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದ್ದರು.
ಸಂಜೆ ವೇಳೆಗೆ ಪೊಲೀಸರು ಓರ್ವನನ್ನು ಬಿಡುಗಡೆಗೊಳಿಸಿದ್ದರು. ಆದರೂ ಪಟ್ಟುಬಿಡದ ಪಿಎಫ್ಐ ಠಾಣೆಯ ಮುಂಭಾಗ ಜಮಾಯಿಸಿದ್ದರು. ಈ ನಿಟ್ಟಿನಲ್ಲಿ ಜನರನ್ನು ಚದುರಿಸುವ ಹಿನ್ನೆಲೆಯಲ್ಲಿ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಉಪ್ಪಿನಂಗಡಿ ಪೇಟೆಯಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಸಿಕ್ಕಸಿಕ್ಕವರಿಗೆ ಪೊಲೀಸರು ಲಾಠಿ ಬೀಸಿದ್ದಾರೆ. ರಕ್ತ ಬರುವವರೆಗೆ ಪೊಲೀಸರು ತಮ್ಮ ಕ್ಷೌರ್ಯ ಮೆರೆದಿದ್ದಾರೆ
ಪ್ರತಿಭಟನೆ ಮುಂದುವರಿಸಿದ ಕಾರ್ಯಕರ್ತರ ಮೇಲೆ ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಪೊಲೀಸರು ಏಕಾಏಕಿ ಲಾಠಿ ಬೀಸಿದ್ದಾರೆ, ಪರಿಣಾಮ ಹಲವು ಪ್ರತಿಭಟನಾಕಾರರು ತೀವ್ರ ವಾಗಿ ಗಾಯಗೊಂಡಿದ್ದಾರೆ