February 4, 2026

ಮಂಗಳೂರು: ಸ್ಟೇಟ್‌ ಬ್ಯಾಂಕ್‌ ಬಳಿ ಖಾಸಗಿ ಬಸ್‌ ನಿರ್ವಾಹಕನ ಮೃತದೇಹ ಪತ್ತೆ

0
image_editor_output_image682628919-1729057235712.jpg

ಮಂಗಳೂರು: ಸ್ಟೇಟ್‌ ಬ್ಯಾಂಕ್‌ನ ಇಂದಿರಾ ಕ್ಯಾಂಟೀನ್‌ ಪರಿಸರದಲ್ಲಿ ಖಾಸಗಿ ಬಸ್‌ ನಿರ್ವಾಹಕರೊಬ್ಬನ ಶವ ಪತ್ತೆಯಾಗಿದೆ.

ಮಂಗಳೂರು – ವಿಟ್ಲ ಮಧ್ಯೆ ಸಂಚರಿಸುತ್ತಿದ್ದ ಫಲ್ಗುಣಿ, ಸೆಲಿನಾ ಬಸ್ಸುಗಳಲ್ಲಿ ನಿರ್ವಾಹಕನಾಗಿ ದುಡಿಯುತ್ತಿದ್ದ ರಾಜೇಶ್‌ (30) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಇಂದಿರಾ ಕ್ಯಾಂಟೀನ್‌ ಪರಿಸರದಲ್ಲಿ ಅನಾಥ ಸ್ಥಿತಿಯಲ್ಲಿ ಕಂಡಕ್ಟರ್‌ ರಾಜೇಶನ ಜರ್ಜರಿತವಾದ ಮೃತದೇಹ ಪತ್ತೆಯಾಗಿದ್ದು, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಶಂಕೆ ಮೂಡಿದೆ.

ವಿಪರ್ಯಾಸ ಅಂದರೆ ಆತನ ಪರಿಚಯವಿರುವ ಯಾರಿಗೂ ಆತನ ಕುಟುಂಬದ ಬಗ್ಗೆ ಮಾಹಿತಿ ಇಲ್ಲ. ಅವನು ಎಲ್ಲಿಯವನು ಆವನ ಸಂಬಂಧಿಗಳು ಯಾರು ಎನ್ನುವುದು ಯಾರಿಗೂ ಗೊತ್ತಿಲ್ಲ.
ಪಾಂಡೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!