August 12, 2026

ಚಾಲಕನ ನಿಯಂತ್ರಣ ತಪ್ಪಿ ಸಿಟಿ ಬಸ್ ಪಲ್ಟಿ: ಹಲವರಿಗೆ ಗಾಯ

0
image_editor_output_image-1537267463-1729057733567.jpg

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಸಿಟಿ ಬಸ್ ಪಲ್ಟಿಯಾಗಿ, ಹಲವರು ಗಾಯಗೊಂಡ ಘಟನೆ ಶಿವಮೊಗ್ಗದ ವಿನೋಬಾ ನಗರದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.

ನಗರದ ಬೊಮ್ಮನಕಟ್ಟೆ ರೈಲ್ವೆ ಗೇಟ್ ಸಮೀಪದ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದ್ದು, ಎರಡು ಮಕ್ಕಳು ಸೇರಿದಂತೆ 6 ಜನರಿಗೆ ಗಾಯಗೊಂಡಿದ್ದಾರೆ.

ಬಸ್ ಚಾಲಕ ನಿರ್ಲಕ್ಷ್ಯದಿಂದ ವೇಗವಾಗಿ ಬಸ್ ಚಲಾಯಿಸಿ, ಹಂಪ್ ಹಾರಿಸಿದ ಪರಿಣಾಮ ಸ್ಟೇರಿಂಗ್ ಕಟ್ ಆಗಿ, ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಕಬ್ಬಿಣದ ತಡೆಗೋಡೆ ದಾಟಿ, ಚರಂಡಿಗೆ ಬಸ್ ಬಿದ್ದಿದೆ.

ಬೊಮ್ಮನಕಟ್ಟೆಯಿಂದ ಗೋಪಾಳಕ್ಕೆ ಹೊರಟಿದ್ದ ಸಿಟಿ ಬಸ್ ನಲ್ಲಿ ಸುಮಾರು 20 ಜನ ಪ್ರಯಾಣಿಕರಿದ್ದರು. ಘಟನೆಯಲ್ಲಿ ಇಬ್ಬರಿಗೆ ತೀವ್ರ ಗಾಯವಾಗಿದ್ದು, ಎಲ್ಲಾ 6 ಜನ ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!