August 12, 2026

ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ಯೂಟ್ಯೂಬ್ ನೋಡಿ ಹತ್ಯೆಗಾಗಿ ಶೂಟಿಂಗ್ ತರಬೇತಿ ಪಡೆದುಕೊಂಡಿದ್ದ ಆರೋಪಿಗಳು

0
image_editor_output_image-1468629482-1729060281213.jpg

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ, ಹಿರಿಯ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಅವರ ಹತ್ಯೆ ಪ್ರಕರಣ ತನಿಖೆ ಚುರುಕುಗೊಂಡಿದೆ.

ಮುಂಬೈ ಕ್ರೈಂ ಬ್ರ‍್ಯಾಂಚ್ ಪೊಲೀಸರ ತನಿಖೆಯಲ್ಲಿ ಹಲವು ಆಘಾತಕಾರಿ ಸಂಗತಿಗಳು ಬಹಿರಂಗಗೊಂಡಿದ್ದು, ಬಂಧಿತ ಆರೋಪಿಗಳು ಯೂಟ್ಯೂಬ್ ನೋಡಿ ಹತ್ಯೆಗಾಗಿ ಶೂಟಿಂಗ್ ತರಬೇತಿ ಪಡೆದುಕೊಂಡಿದ್ದರು ಎಂದು ತಿಳಿದು ಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಮಾತನಾಡಿ, ಆರೋಪಿಗಳು ಮೂರು ತಿಂಗಳ ಹಿಂದೆಯೇ ಪುಣೆಯಲ್ಲಿ ಬಾಬಾ ಸಿದ್ದಿಕಿ ಹತ್ಯೆಗೆ ಯೋಜನೆ ರೂಪಿಸಿದ್ದರು.

ಆದರೆ ಅದು ಯಶಸ್ವಿಯಾಗಿರಲಿಲ್ಲ. ಬಳಿಕ ಮುಂಬೈನಲ್ಲಿ ಹತ್ಯೆಗೆ ಪ್ಲ್ಯಾನ್‌ ಮಾಡಿ, ಕಳೆದ ಶನಿವಾರ ತಡರಾತ್ರಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಆರೋಪಿಗಳಾದ ಗುರ್ಮೈಲ್ ಸಿಂಗ್ ಮತ್ತು ಧರ್ಮರಾಜ್ ಕಶ್ಯಪ್ ಆರು ಸುತ್ತು ಗುಂಡು ಹಾರಿಸಿದ್ದರು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!