August 12, 2026

ದಿನೇಶ್ ಗುಂಡೂರಾವ್ ಕುಟುಂಬದ ಬಗ್ಗೆ ವಿವಾದಾತ್ಮಕ ಹೇಳಿಕೆ: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

0
images.jpeg

ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕುಟುಂಬದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ.

ದಿನೇಶ್ ಗುಂಡೂರಾವ್ ಪತ್ನಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಎಂಎಂ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರಾದ ಕೆ‌.ಎನ್.ಶಿವಕುಮಾರ್ ಅವರು ಈ ಆದೇಶ ಮಾಡಿದ್ದಾರೆ.

ಯತ್ನಾಳ್ ರಿಗೆ ಬುಧವಾರ ವಿಚಾರಣೆಗೆ ನೋಟಿಸ್ ನೀಡಿದ್ದರು. ಗೈರಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!