August 12, 2026

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಮಕ್ಕಳು ಸೇರಿದಂತೆ ಕಾರಿನಲ್ಲಿದ್ದ 7 ಮಂದಿ ಮೃತ್ಯು

0
image_editor_output_image1599700574-1729149273669.jpg

ಹೈದರಾಬಾದ್: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಪರಿಣಾಮ ಮಕ್ಕಳು ಸೇರಿದಂತೆ ಕಾರಿನಲ್ಲಿದ್ದ ಏಳು ಮಂದಿ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ಸಂಭವಿಸಿದೆ.

ತೆಲಂಗಾಣದ ಭೀಮ್ಲಾ ತಾಂಡಾದಲ್ಲಿ ವಾಸವಿದ್ದ ಕುಟುಂಬವೊಂದು ಕಾರ್ಯಕ್ರಮ ನಿಮಿತ್ತ ತೂಪ್ರಾಣಕ್ಕೆ ತೆರಳಿತ್ತು ಕಾರ್ಯಕ್ರಮ ಮುಗಿಸಿ ಭೀಮ್ಲಾ ತಾಂಡಾಕ್ಕೆ ವಾಪಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನೀರು ತುಂಬಿದ್ದ ಹೊಂಡಕ್ಕೆ ಬಿದ್ದಿದೆ.

ಅಪಘಾತದಿಂದ ಗಾಯಗೊಂಡ ಗಾಯಾಳುಗಳು ಕಾರಿನಿಂದ ಹೊರಬರಲಾಗದೆ ಗಂಭೀರ ಸ್ಥಿತಿಯಲ್ಲಿದ್ದರು ಎನ್ನಲಾಗಿದೆ ವಿಚಾರ ತಿಳಿದ ಪೊಲೀಸರು ಹಾಗೂ ಸ್ಥಳೀಯರು ಸೇರಿ ಕಾರಿನಲ್ಲಿದ್ದವರನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಏಳು ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!