ICC ಮಹಿಳಾ T20 ವಿಶ್ವಕಪ್: ಆಸ್ಟ್ರೇಲಿಯಾವನ್ನು ಬಗ್ಗು ಬಡಿದು ಫೈನಲ್ ಪ್ರವೇಶಿಸಿದ ದಕ್ಷಿಣ ಆಫ್ರಿಕಾ
ದುಬೈ: ಐಸಿಸಿ ಮಹಿಳಾ ಟಿ 20 ವಿಶ್ವಕಪ್‌ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಆರು ಬಾರಿಯ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ತಂಡ ಬಗ್ಗು ಬಡಿದು ದಕ್ಷಿಣ ಆಫ್ರಿಕಾ ವನಿತಾ ತಂಡ ಫೈನಲ್ ಪ್ರವೇಶಿಸಿದೆ.
ಗುರುವಾರ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮಹಿಳಾ ತಂಡ ಬಲಿಷ್ಠ ಆಸ್ಟ್ರೇಲಿಯಾವನ್ನು 8 ವಿಕೆಟ್‌ಗಳಿಂದ ಮಣಿಸಿ ದಕ್ಷಿಣ ಆಫ್ರಿಕಾ ತಂಡ ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಫೈನಲ್‌ಗೆ ಪ್ರವೇಶ ಪಡೆಯುವಲ್ಲಿ ಯಶಸ್ವಿಯಾಗಿದೆ. ದಕ್ಷಿಣ ಆಫ್ರಿಕಾ ಪರ ಬ್ಯಾಟಿಂಗ್‌ನಲ್ಲಿ ಮಿಂಚಿದ ಆ್ಯನೆಕ್ ಬಾಶ್ ಸಿಡಿಲಬ್ಬರದ ಅರ್ಧಶತಕ (74ರನ್) ಸಿಡಿಸಿದರೆ, ನಾಯಕಿ ಲಾರಾ ವೊಲ್ವಾರ್ಡ್ಟ್ ಕೂಡ 42 ರನ್‌ಗಳಿಸಿ ಉಪಯುಕ್ತ ಇನ್ನಿಂಗ್ಸ್ ಆಡಿದರು.





