February 4, 2026

ಪುತ್ತೂರು: ಮಧ್ಯಾಹ್ನ ಬಂಧನಕ್ಕೆ ಒಳಗಾಗಿದ್ದ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಗೆ  ಸಂಜೆ ನ್ಯಾಯಾಲಯದಿಂದ ಜಾಮೀನು ಮಂಜೂರು

0
image_editor_output_image-171653246-1729244525156

ಪುತ್ತೂರು: ಬಿಲ್ಲವ ಹೆಣ್ಣು ಮಕ್ಕಳನ್ನು ಹಾಗೂ ಭಜನೆ ಸಂಕೀರ್ತನೆ ಮಾಡುವವರನ್ನು ನಿಂದಿಸಿರುವ ಆರೋಪದಡಿ ಇಂದು ಮಧ್ಯಾಹ್ನ ಬಂದಿತರಾಗಿದ್ದ ಪುತ್ತೂರು ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರಿಗೆ ಇಂದು ಸಂಜೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ.

ಮೂರು ದಿನಗಳ ಹಿಂದೆ ಸಂಜೀವ ಪೂಜಾರಿಯವರು ಕೇರಳ ರಾಜ್ಯದ ಮಂಜೇಶ್ವರದ ವ್ಯಕ್ತಿಯೊಬ್ಬರ ಜತೆ ಆಡಿದರೆನ್ನಲಾದ ಫೋನ್ ಸಂಭಾಷಣೆಯ ಆಡಿಯೋ ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು .

ಹಿಂದು ಜಾಗರಣಾ ವೇದಿಕೆಯ ಸುಳ್ಯ ತಾಲೂಕು ಸಂಯೋಜಕ ಸಚಿನ್ ವಳಲಂಬೆ ಎಂಬವರು ಬೆಳ್ಳಾರೆ ಠಾಣೆಯಲ್ಲಿ ಈ ಕುರಿತು ದೂರು ನೀಡಿದ್ದರು . ದೂರು ಸ್ವೀಕರಿಸಿದ ಪೊಲೀಸರು ಎರಡು ದಿನದ ಬಳಿಕ ಗುರುವಾರ ಸಂಜೆ ಪ್ರಕರಣ ದಾಖಲಿಸಿದ್ದರು .

ಇಂದು ಆರೋಪಿಯನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿ ಪುತ್ತೂರು ಡಿವೈಎಸ್ಪಿ ಕಛೇರಿ ಮುಂಭಾಗ, ಹಿಂದೂ ಜಾಗರಣೆ ವೇದಿಕೆ ನೇತ್ರತ್ವದಲ್ಲಿ ಸಂಘಪರಿವಾರದ ಅಂಗ ಸಂಸ್ಥೆಗಳು ಪ್ರತಿಭಟನೆ ನಡೆಸಿತ್ತು. ಅಲ್ಲದೇ ತಕ್ಷಣ ಬಂಧಿಸಬೇಕು ಎಂದು ಅಗ್ರಹಿಸಿ ಡಿವೈಎಸ್ಪಿ ಕಛೇರಿ ಮುಂಭಾಗ ಭಜನೆ ಹಾಡುವ ಮೂಲಕ ಪ್ರತಿಭಟನಕಾರರು ದರಣಿ ಸತ್ಯಾಗ್ರಹ ಕೂಡ ನಡೆಸಿದ್ದರು.

ಮಧ್ಯಾಹ್ನ ಬಂಧನಕ್ಕೆ ಒಳಗಾಗಿದ್ದ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರುಗೆ ಸಂಜೆ ನ್ಯಾಯಾಲಯ ಜಾಮೀನು ಮಂಜೂರು ಆಗಿದೆ.

Leave a Reply

Your email address will not be published. Required fields are marked *

error: Content is protected !!