March 21, 2026

ವಿಧಾನಸಭಾ ಉಪ ಚುನಾವಣೆ: ಶಿಗ್ಗಾಂವ್ ಕ್ಷೇತ್ರದಿಂದ ಬಸವರಾಜ ಬೊಮ್ಮಾಯಿ ಪುತ್ರನಿಗೆ ಟಿಕೆಟ್

0
n635730836172935117624813d42ad97c23113f2174a60e59c9cd1c4899fb35b0c43e2062c7328f198c48fa.jpg

ಬೆಂಗಳೂರು: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದೆ. ಈ ಮೂರು ಕ್ಷೇತ್ರಗಳಿಗೆ ಬಿಜೆಪಿಯಿಂದ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಶಿಗ್ಗಾವಿಯಿಂದ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರನಿಗೆ ಟಿಕೆಟ್ ನೀಡಲಾಗಿದೆ.

ಇಂದು ವಿಧಾನಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ. ಸಂಡೂರು ಕ್ಷೇತ್ರ ಬಂಗಾರು ಹನುಮಂತು ಅವರಿಗೆ ಟಿಕೆಟ್ ನೀಡಿದ್ದು, ಶಿಗ್ಗಾಂವಿ ಕ್ಷೇತ್ರ ಭರತ್ ಬಸವರಾಜ್ ಬೊಮ್ಮಾಯಿ ಅವರಿಗೆ ಟಿಕೆಟ್ ನೀಡಲಾಗಿದೆ.

ವಿಧಾನಸಭೆ ಚುನಾವಣೆಯಲ್ಲಿ ಶಿಗ್ಗಾಂವಿನಿಂದ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದ ಬಸವರಾಜ ಬೊಮ್ಮಯಿ ಅವರು ಹಾವೇರಿ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಸಂಸದರಾಗಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!