December 19, 2025

ಉಳ್ಳಾಲದ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಕೇರಳ ಮೂಲದ ವ್ಯಕ್ತಿ ಸೇರಿ ಮೂವರ ಬಂಧನ

0
Screenshot_2021-12-15-10-31-10-49_680d03679600f7af0b4c700c6b270fe7.jpg

ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ನಗರದ ಇಬ್ಬರು ಹಾಗೂ ಕೇರಳ ಮೂಲದ ಓರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.

ಸೋಮವಾರ ಮುಡಿಪು ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ಗೊಂದಲಮಯ ವಾತಾವರಣ ನಿರ್ಮಾಣವಾಗಿದ್ದು, ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಫ್ಲಾಟ್‌ಗೆ ಭೇಟಿ ನೀಡಿ ಪರಿಶೀಲಿಸಿದರು. ಅಪ್ರಾಪ್ತ ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೋಕ್ಸೊ ಕಾಯ್ದೆಯಡಿ ಅಡಿ ಪ್ರಕರಣ ದಾಖಲಿಸಲಾಗಿದೆ.

ತನ್ನ ಅಪ್ರಾಪ್ತ ಬಾಲಕಿಗೆ ಅಲ್ಕೋಹಾಲ್ ಕುಡಿಸಿ, ಅಮಲು ಅಮಲು ಪದಾರ್ಥಗಳನ್ನು ನೀಡಿ ನಂತರ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಬಾಲಕಿಯ ತಾಯಿ ದೂರು ನೀಡಿದ್ದಾರೆ. ಕೌನ್ಸೆಲಿಂಗ್‌ಗಾಗಿ ಬಾಲಕಿಯನ್ನು ಸಂಬಂಧಪಟ್ಟ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಬಂಧಿತರಲ್ಲಿ ಈಗಾಗಲೇ ಒಬ್ಬ ಆರೋಪಿ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಚಿಲಿಂಬಿಗುಡ್ಡೆಯಲ್ಲಿ ಪೋಕ್ಸೋ ಪ್ರಕರಣದ ಆರೋಪಿಯಾಗಿದ್ದಾನೆ. ಮಾತ್ರವಲ್ಲದೆ ನಾಗ ಬನ ಧ್ವಂಸ ಮಾಡಿದ ಆರೋಪ ಎದುರಿಸುತ್ತಿರುವ ವ್ಯಕ್ತಿಗಳಿಗೆ ಬೆಂಬಲವನ್ನೂ ನೀಡಿದ್ದ. ಈತನ ಮೇಲೆ ಈಗಾಗಲೇ ಎರಡು ಪೋಕ್ಸೊ ಪ್ರಕರಣಗಳು, ದರೋಡೆ ಮತ್ತು ಎನ್‌ಡಿಪಿಎಸ್ ಕಾಯ್ದೆಯಡಿ 5 ಪೊಲೀಸ್ ಠಾಣೆಯಲ್ಲಿಏಳು ಪ್ರಕರಣಗಳಿವೆ ಎಂದು ಕಮಿಷನರ್ ತಿಳಿಸಿದ್ದಾರೆ

ಚಿಲಿಂಬಿಗುಡ್ಡೆಯಲ್ಲಿ ನಡೆದ ಪ್ರಕರಣವೊಂದರಲ್ಲಿ ಬಾಲಕಿಯನ್ನು ಚುಡಾಯಿಸಲಾಗಿತ್ತು. ಈ ಸಂಬಂಧ ಆಕೆ ಪೊಲೀಸ್ ಠಾಣೆಗೆ ಭೇಟಿ ನೀಡಿದಾಗ ಹೆಡ್‌ಕಾನ್ಸ್‌ಟೇಬಲ್‌ಯೊಬ್ಬರು ಆಕೆಯ ಫೋನ್‌ ನಂಬರ್‌ ಪಡೆದು ಕೆಟ್ಟ ಸಂದೇಶಗಳನ್ನು ಹಂಚಿಕೊಂಡಿದ್ದರು. ಈತನನ್ನು ವಶಕ್ಕೆ ಪಡೆದು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ

Leave a Reply

Your email address will not be published. Required fields are marked *

You may have missed

error: Content is protected !!