August 12, 2026

ಮಂಗಳೂರು: MRPL ಸೆಕ್ಯೂರಿಟಿ ಗಾರ್ಡ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

0
image_editor_output_image-1950616122-1729411988111.jpg

ಮಂಗಳೂರು : MRPL ಅಧೀನದಲ್ಲಿರುವ OMPL ಕಂಪೆನಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದ ಯುವಕನೋರ್ವ ನಾಪತ್ತೆಯಾಗಿದ್ದು ಶನಿವಾರ ಆತನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಯುವಕನನ್ಜು ಅಸ್ಸಾಂ ಮೂಲದ ಸಮಾನ್ ಅಲಿ (26) ಎಂದು ಗುರುತ್ತಿಸಲಾಗಿದೆ. ಸಮಾನ್ ಅಲಿ ಕಾಂಟ್ರ್ಯಾಕ್ ಕಂಪೆನಿಯೊಂದರ ಮೂಲಕ ಒಎಮ್ ಪಿಎಲ್ ಕಂಪೆನಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ‌.

ಗುರುವಾರ ರಾತ್ರಿ ಪಾಳಿಯಲ್ಲಿ ಕೆಲಸಕ್ಕೆ ತೆರಳಿದ್ದ ಅಲಿ ಶುಕ್ರವಾರ ಬೆಳಗ್ಗಿನ ಜಾವ 4 ಗಂಟೆಯ ವರೆಗೆ ಒಎಮ್ ಪಿ ಎಲ್ ನ ಒಳಗೆ ಕೆಲಸದಲ್ಲಿ ನಿರತನಾಗಿರುವುದು ಅಲ್ಲಿನ ಸಿಸಿ ಟಿವಿಯಲ್ಲಿ ದಾಖಲಾಗಿದೆ. ಆ ಬಳಿಕ ಆತ ಸಿಸಿ ಟಿವಿಯಲ್ಲಿ ಎಲ್ಲಿಯೂ ಕಾಣಿಸಿಕೊಳ್ಳದೆ ನಾಪತ್ತೆಯಾಗಿದ್ದ.

ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿರುವ MRPL ಅಧೀನ ಸಂಸ್ಥೆ ಒಎಂಪಿಎಲ್ ಕಂಪೆನಿಯಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಶನಿವಾರ ಒಎಂಪಿಎಲ್ ನ ಒಡಿಸಿ ಗೇಟ್‌ ಬಳಿ ಪತ್ತೆಯಾಗಿದೆ.

ಈತನ ಮೃತದೇಹ ತನ್ನ ವಿಸಿಲ್‌ ಗಾರ್ಡನ್ನು ಮರಕ್ಕೆ ಸುತ್ತಿ ನೇಣು ಬಿಗಿದುಕೊಂಡ ರೀತಿಯಲ್ಲಿ ಪತ್ತೆಯಾಗಿದೆ. ಒಎಂಪಿಎಲ್ ಸುಮಾರು 15 ಅಡಿ ಎತ್ತರದ ಕಾಂಪೌಂಡ್‌ ಹಾರಿ ಸುಮಾರು 300-400 ಮೀಟರ್‌ ದೂರಕ್ಕೆ ನಡೆದು ಬಂದು ಬಳಿಕ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!