October 22, 2024

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿಯಲ್ಲಿ ಇನ್ನೆರಡು ದಿನಗಳ ಕಾಲ ಮಳೆ ಸಾಧ್ಯತೆ

0

ಮಂಗಳೂರು : ಬಂಗಾಳಕೊಲ್ಲಿಯಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ಪೂರ್ವ ಕರಾವಳಿ ಹಾಗೂ ಪಶ್ವಿಮ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುತ್ತಿದೆ.

ಇದರ ಪರಿಣಾಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೆರಡು ದಿನ ಮಳೆ ಸುರಿಯಲಿದ್ದು, ಅಕ್ಟೋಬರ್ 21 ಮತ್ತು 22 ರಂದು ಎಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಈಗಾಗಲೇ ಬಂಗಾಳಕೊಲ್ಲಿಯ ಸೈಕ್ಲೋನ್ ಎಫೆಕ್ಟ್‌ನಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆಯಾಗಿ ಅವಾಂತರ ಸೃಷ್ಟಿಸಿತ್ತು. ಇತ್ತ ಅರಬ್ಬೀ ಸಮುದ್ರದಲ್ಲಿನ ವಾಯಭಾರ ಕುಸಿತದಿಂದಲೂ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ ಮೊದಲಾದ ಕಡೆಯಲ್ಲಿ ವ್ಯಾಪಕ ಮಳೆಯಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!