August 12, 2026

ಭಾರೀ ಮಳೆ: ಈ ಜಿಲ್ಲೆಯ ಎಲ್ಲ ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ

0
image_editor_output_image-1210382102-1729491406922.jpg

ಬೆಂಗಳೂರು: ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ನಗರ ವ್ಯಾಪ್ತಿಯ ಎಲ್ಲ ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಬೆಂಗಳೂರು ನಗರ ಆಯುಕ್ತರು ಬೆಂಗಳೂರಿನ ಎಲ್ಲ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ, ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಇಂದು ಒಂದು ದಿನದ ಮಟ್ಟಿಗೆ ಈ ಆದೇಶ ಅನ್ವಯವಾಗಲಿದ್ದು, ಭಾರಿ ಮಳೆ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಪ್ರಕಟಿಸಲಾಗಿದೆ.

ಅಂಗನವಾಡಿ, ಎಲ್ಕೆಜಿ, ಯುಕೆಜಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ, ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಅನುದಾನಿತ ಶಾಲೆ, ಅನುದಾನ ರಹಿತ ಶಾಲೆ ಸೇರಿ ನಗರದ ಎಲ್ಲ ಶಾಲೆಗಳಿಗೆ ರಜೆ ಘೋಷಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!