September 21, 2026

ಶಿವಮೊಗ್ಗ: ಕಾರ್ತಿಕ್‌ ಮೋಟರ್ಸ್‌ ಶೋ ರೂಂನಲ್ಲಿ ಭಾರಿ ಅಗ್ನಿ ಅವಘಡ

0
image_editor_output_image527389635-1729502988072.jpg

ಶಿವಮೊಗ್ಗ : ಶಿವಮೊಗ್ಗ ಎನ್‌.ಟಿ.ರಸ್ತೆ ಜಂಕ್ಷನ್‌ನಲ್ಲಿರುವ ಕಾರ್ತಿಕ್‌ ಮೋಟರ್ಸ್‌ ಶೋ ರೂಂನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯಿಂದಾಗಿ ಶೋ ರೂಂನಲ್ಲಿ ಕೆಲವು ವಾಹನಗಳಿಗೆ ಹಾನಿಯಾಗಿದ್ದು ಲಕ್ಷಾಂತರ ರೂಪಾಯಿಗಳ ನಷ್ಟ ಸಂಭವಿಸಿದೆ.

ಬೆಂಕಿ ಆವರಿಸುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದು ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಮೂರ್ನಾಲ್ಕು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದವು.

 

ಇನ್ನು, ಬೆಂಕಿ ಹೊತ್ತಿಕೊಂಡ ವಿಷಯ ತಿಳಿಯುತ್ತಿದ್ದಂತೆ ಶೋ ರೂಂ ಮುಂಭಾಗ ದೊಡ್ಡ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು. ಹಾಗಾಗಿ ಎನ್‌.ಟಿ.ರಸ್ತೆ ಮತ್ತು ಬೈಪಾಸ್‌ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಯಿತು. ಸಂಚಾರ ಠಾಣೆ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಹರಸಾಹಸ ಪಡಬೇಕಾಯಿತು.

Leave a Reply

Your email address will not be published. Required fields are marked *

You may have missed

error: Content is protected !!