May 5, 2026

ಸಿಪಿ ಯೋಗೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

0
image_editor_output_image904461636-1729660032543

ಬೆಂಗಳೂರು: ಚನ್ನಪಟ್ಟಣದಲ್ಲಿ ಆಪರೇಷನ್‌ ಸಕ್ಸಸ್‌ ಆಗಿದ್ದು ಸಿಪಿ ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.

ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಡಿಕೆ ಶಿವಕುಮಾರ್‌ ಮತ್ತು ಡಿಕೆ ಸುರೇಶ್‌ ಅವರ ಸಮ್ಮುಖದಲ್ಲಿ ಯೋಗೇಶ್ವರ್ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.

ಮಂಗಳವಾರ ತಡರಾತ್ರಿ ಎರಡು ಸಲ ಮನೆಯಿಂದ ರಹಸ್ಯ ಸ್ಥಳಕ್ಕೆ ಹೋಗಿ ಯೋಗೀಶ್ವರ್ ಚರ್ಚಿಸಿದ್ದರು. ಮಧ್ಯರಾತ್ರಿ ಖಾಸಗಿ ಹೊಟೇಲಿನಲ್ಲಿ ಡಿಕೆಶಿಯನ್ನು ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಭೇಟಿ ವೇಳೆ ಇಂದು ಬೆಳಗ್ಗೆ ಸಿಎಂ ನಿವಾಸದಲ್ಲಿ ಪಕ್ಷ ಸೇರ್ಪಡೆಗೆ ಸಿಪಿವೈಗೆ ಡಿಕೆಶಿ ತಿಳಿಸಿದ್ದರು. ಅದರಂತೆ ಇಂದು ಬೆಳಗ್ಗೆಯೇ ಡಿಕೆಶಿ ನಿವಾಸಕ್ಕೆ ಯೋಗೀಶ್ವರ್ ತೆರಳಿದ್ದರು.

Leave a Reply

Your email address will not be published. Required fields are marked *

error: Content is protected !!