May 5, 2026

ಉಡುಪಿ: ಅಂಪಾರು ಮನೆಯಲ್ಲಿ ಕಳವು ಪ್ರಕರಣ:  ಆರೋಪಿ ಅಪ್ರಾಪ್ತ ಬಾಲಕನ ಬಂಧನ

0
image_editor_output_image163466049-1729754329044

ಉಡುಪಿ: ಅಂಪಾರಿನ ಮನೆಯೊಂದರಲ್ಲಿ ಕೆಲವು ದಿನಗಳ ಹಿಂದೆ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಕಾನೂನು ಸಂಘರ್ಷಕ್ಕೆ ಒಳಗಾಗಿದ್ದ ಬಾಲಕನನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ.

ಅಂಪಾರು ಗ್ರಾಮದ ಅಕ್ಕಯ್ಯ ಎಂಬವರು ತನ್ನ ಮಗಳೊಂದಿಗೆ ದಸರಾ ರಜೆ ಪ್ರಯುಕ್ತ ತಾಯಿ ಮನೆಗೆ ತೆರಳಿದ್ದರು. ವಾಪಾಸ್ಸು ಅಂಪಾರು ಮನೆಗೆ ಬಂದು ನೋಡಿದಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿತ್ತು.

ಈ ಬಗ್ಗೆ ಶಂಕರನಾರಾಯಣ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಬಾಲಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತನಿಂದ ಎರಡು ಮೊಬೈಲ್ ಪೋನ್ ಗಳು, 2,500ರೂ. ನಗದು, ಕಿವಿ ಓಲೆಗಳು, ಉಂಗುರಗಳು, ಬೆಳ್ಳಿಯ ಸರಗಳು, 5 ಕಾಲುಂಗುರಗಳು ಸೇರಿ ಒಟ್ಟು 87ಸಾವಿರದ 890ರೂ. ಮೌಲ್ಯದ ಸೊತ್ತು ವಶಕ್ಕೆ ಪಡೆಯಲಾಗಿದೆ. ಕಾನೂನು ಸಂಘ ರ್ಷಕ್ಕೆ ಒಳಗಾದ ಬಾಲಕನನ್ನು ಉಡುಪಿ ಬಾಲ ನ್ಯಾಯ ಮಂಡಳಿಗೆ ಹಾಜರುಪಡಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!