ಶಿಗ್ಗಾಂವಿ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್ ಅಹ್ಮದ್ ಖಾನ್ ಹೆಸರು ಘೋಷಣೆ
ಬೆಂಗಳೂರು : ಉಪ ಚುನಾವಣೆ ನಡೆಯಲಿರುವ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರ ಹೆಸರು ಷೋಷಣೆಯಾಗಿದೆ. ಆ ಮೂಲಕ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಗೆ ಯಾಸಿರ್ ಖಾನ್ ಪಠಾಣ್ ಎದುರಾಳಿಯಾಗಿದ್ದಾರೆ.
ಉಪ ಚುನಾವಣೆ ನಡೆಯಲಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಚನ್ನಪಟ್ಟಣ ಹಾಗೂ ಸಂಡೂರು ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಹೆಸರನ್ನು ಈಗಾಗಲೇ ಘೋಷಿಸಿದೆ.




