September 21, 2026

ಸುರತ್ಕಲ್: 30 ವರ್ಷಗಳ ಹಿಂದೆ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿಯ ಬಂಧನ

0
image_editor_output_image1597756940-1729828430755.jpg

ಮಂಗಳೂರು : ಸುಮಾರು 30 ವರ್ಷಗಳ ಹಿಂದೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎಂಆರ್ ಪಿಎಲ್ ಬಳಿಯಲ್ಲಿ ನಡೆದ ಕೊಲೆ ಹಾಗೂ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ದಸ್ತಗಿರಿಯಾಗದೇ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ದಸ್ತಗಿರಿ ಮಾಡುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿಯವರಾದ ಶ್ರೀ ಮನೋಜ್ ಕುಮಾರ್ ನಾಯ್ಕ್, ಪೊಲೀಸ್ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ, ಎಎಸ್ಐ ಮೋಹನ್ ಕೆ ವಿ ಹಾಗೂ ಸಿಸಿಬಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು. 30 ವರ್ಷಗಳ ಹಳೆಯ ಪ್ರಕರಣದ ಆರೋಪಿ ಜೋಸ್ ಕುಟ್ಟಿ ಪಾಪಚ್ಚನ್ ಎಂಬಾತನನ್ನು ಪತ್ತೆ ಹಚ್ಚಿದ ಸಿಸಿಬಿ ಪೊಲೀಸರ ಕಾರ್ಯವನ್ನು ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ ಅನುಮಪ್ ಅಗ್ರವಾಲ್, ಐಪಿಎಸ್ ರವರು ಶ್ಲಾಫಿಸಿರುತ್ತಾರೆ.

 

Leave a Reply

Your email address will not be published. Required fields are marked *

You may have missed

error: Content is protected !!