ಕಾಸರಗೋಡು | ಹಣ ಪಡೆದು ಉದ್ಯೋಗ ಕೊಡಿಸುವುದಾಗಿ ವಂಚನೆ: ಆರೋಪಿ ಶಾಲಾ ಶಿಕ್ಷಕಿಯ ಬಂಧನ
ಕಾಸರಗೋಡು: ಹಣ ಪಡೆದು ಉದ್ಯೋಗ ಕೊಡಿಸುವುದಾಗಿ ಹೇಳಿ ಜನರನ್ನು ವಂಚಿಸಿದ ಆರೋಪಿ ಶಾಲಾ ಶಿಕ್ಷಕಿಯನ್ನು ವಿದ್ಯಾನಗರ ಪೊಲೀಸರು ಗುರುವಾರ ಸಂಜೆ ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಪೆರ್ಲ ಶೇಣಿ ಬಳ್ತಕ್ಕಲ್ ನಿವಾಸಿ ಸಚಿತ ರೈ (27) ಎಂದು ಗುರುತಿಸಲಾಗಿದೆ.
ಆಕೆ 12ಕ್ಕೂ ಹೆಚ್ಚು ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾಳೆ ಎಂದು ವರದಿಯಾಗಿದೆ. ಆಕೆಯ ವಿರುದ್ಧ ಉಪ್ಪಿನಂಗಡಿ, ಬದಿಯಡ್ಕ, ಕುಂಬಳೆ, ಮಂಜೇಶ್ವರ, ಕಾಸರಗೋಡು, ಆದೂರು, ಮೇಲ್ಪರಂಬ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದೆ. ಕೆಲ ದಿನಗಳಿಂದ ತಲೆಮರೆಸಿಕೊಂಡಿದ್ದರು.