August 6, 2026

ಶ್ಯಾಮ್ ಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಪ್ರಕರಣ: 3ನೇ ಆರೋಪಿ ಕಲ್ಲಡ್ಕ ಪ್ರಭಾಕರ್ ವಿರುದ್ಧದ ಚಾರ್ಜ್ ಶೀಟ್ ರದ್ದು

0
image_editor_output_image-1485793598-1729831182826.jpg

ಬೆಂಗಳೂರು; ಶ್ಯಾಮ್ ಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಆರೋಪಿ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಮತ್ತು ಮೂರನೇ ಆರೋಪಿ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧದ ದೋಷಾರೋಪಣೆ ಪಟ್ಟಿ ರದ್ದುಪಡಿಸಿ ಹೈಕೋರ್ಟ್ ನೀಡಿರುವ ಆದೇಶವು ‘ಸರ್ಕಾರದ ಹಿತಾಸಕ್ತಿಗೆ ವಿರುದ್ಧವಾಗಿಲ್ಲ’ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರವು ಅಭಿಪ್ರಾಯಪಟ್ಟಿದೆ.

ರಾಮಕಥಾ ಗಾಯಕಿಯ ಪತಿಯ ಸಹೋದರ ಶ್ಯಾಮ್ ಪ್ರಸಾದ್ ಶಾಸ್ತ್ರಿ ಪುತ್ತೂರಿನ ಕೆದಿಲ ಗ್ರಾಮದಲ್ಲಿ 2014, ಸೆಪ್ಟೆಂಬರ್ 1 ರಂದು ತಮ್ಮ ಬಳಿಯಿದ್ದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಪ್ರಕರಣದಲ್ಲಿ ರಾಜ್ಯ ಹೈಕೋರ್ಟ್ ನೀಡಿದ್ದ ಆದೇಶದ ವಿರುದ್ಧ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ‘ಯೋಗ್ಯ ಪ್ರಕರಣವಲ್ಲ’ ಎಂದು ತೀರ್ಮಾನಿಸಿತ್ತು. ಇದರ ಬೆನ್ನಲ್ಲೇ ಹೈಕೋರ್ಟ್‌ನ ಆದೇಶವು ಸರ್ಕಾರದ ಹಿತಾಸಕ್ತಿಗೆ ವಿರುದ್ಧವಾಗಿಲ್ಲ ಎಂದು ಪ್ರಾಸಿಕ್ಯೂಷನ್ ಇಲಾಖೆಯ ಉಪ ಕಾರ್ಯದರ್ಶಿಯು ಅಭಿಪ್ರಾಯಪಟ್ಟಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!