ಚನ್ನಪಟ್ಟಣ ಉಪಚುನಾವಣೆ: ಎನ್ ಡಿ ಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ
ರಾಮನಗರ: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಶುಕ್ರವಾರ (ಅ.25) ನಾಮಪತ್ರ ಸಲ್ಲಿಕೆ ಮಾಡಿದರು.
ನಾಮಪತ್ರ ಸಲ್ಲಿಕೆಗೂ ಮುನ್ನಾ ಕೆಂಗಲ್ ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸಿದರು. ಮಾಜಿ ಪ್ರಧಾನಿ ದೇವೇಗೌಡ, ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಸಿಎಂ ಸದಾನಂದಗೌಡ, ಆರ್ ಅಶೋಕ್ ಸೇರಿ ಎನ್ ಡಿಎಯ ಹಲವು ಮುಖಂಡರು ಭಾಗಿಯಾಗಿದ್ದರು.
ನಾಮಪತ್ರ ಸಲ್ಲಿಕೆಗೂ ಮುನ್ನ ರೋಡ್ ಶೋ ಮೂಲಕ ಶಕ್ತಿ ಪ್ರದರ್ಶನ ಮಾಡಲಾಯಿತು.




