February 4, 2026

ರಸ್ತೆ ಪಕ್ಕದಲ್ಲೇ KSRTC ಬಸ್ ಪಲ್ಟಿ: ಓರ್ವ ಮಹಿಳೆ ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ

0
image_editor_output_image1654810217-1729847768325.jpg

ವಿಜಯನಗರ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲೇ ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ.

20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಸತ್ತೂರು ಗ್ರಾಮದ ಬಳಿ ನಡೆದಿದೆ. ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಸುತ್ತೂರು ಗ್ರಾಮದ ಹನುಮಕ್ಕ (45) ಮೃತ ಮಹಿಳೆ. ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

ಬಸ್ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಣಿಕರಿಗೆ ಗಾಯಗಳಾಗಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ದಾವಣಗೆರೆಯಿಂದ ಹರಪ್ಪನಹಳ್ಳಿ ಕಡೆ ಕೆಎಸ್ಆರ್ಟಿಸಿ ಬಸ್ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ.

Leave a Reply

Your email address will not be published. Required fields are marked *

error: Content is protected !!