February 4, 2026

ವಿಟ್ಲ ಜೇಸಿ ಶಾಲೆಯಲ್ಲಿ ರಾಜ್ಯಮಟ್ಟದ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ವೈಟ್ ಲಿಫ್ಟಿಂಗ್ ಸ್ಪರ್ಧೆ

0
IMG-20241025-WA0009.jpg

ವಿಟ್ಲ: ಸೋಲು ಗೆಲುವುಗಳನ್ನು ಸಕರಾತ್ಮಕವಾಗಿ ಸ್ವೀಕರಿಸಿದಾಗ ಸಾಧನೆ ಮಾಡಲು ಸಾಧ್ಯ. ವಿಟ್ಲದಂತಹ ಗ್ರಾಮೀಣ ಭಾಗದಲ್ಲಿ ಮೊತ್ತ ಮೊದಲ ಬಾರಿಗೆ ರಾಜ್ಯ ಮಟ್ಟದ ವಿದ್ಯಾರ್ಥಿಗಳ ವೈಟ್ ಲಿಫ್ಟಿಂಗ್ ಸ್ಪರ್ಧೆ ಹಮ್ಮಿಕೊಂಡಿರುವುದು ಹೆಮ್ಮೆ ವಿಚಾರವಾಗಿದೆ. ಕೀಡಾಕೂಟಗಳ ಮೂಲಕ ನೂರಾರು ಪ್ರತಿಭೆಗಳನ್ನು ಹೊರ ಬರಲು ಸಾಧ್ಯವಾಗುತ್ತದೆ ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ ಎಂ. ಜಿ. ಹೇಳಿದರು.

ವಿಟ್ಲ ಬಸವನಗುಡಿ ವಿಠಲ್ ಜೀಸಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಜೇಸಿ ಪೆವಿಲಿಯನ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕರ ಕಚೇರಿ(ಆಡಳಿತ) ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಹಯೋಗದಲ್ಲಿ ನಡೆದ ೨೦೨೪-೨೫ ನೇ ಸಾಲಿನ ರಾಜ್ಯಮಟ್ಟದ ಬಾಲಕ ಬಾಲಕಿಯರ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ವೈಟ್ ಲಿಫ್ಟಿಂಗ್ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕ ರಾಜ್ಯ ವೈಟ್ ಲಿಫ್ಟಿಂಗ್ ಅಸೋಸಿಯೇಶನ್ ಉಪಾಧ್ಯಕ್ಷ ಪುಪ್ಪರಾಜ ಹೆಗ್ಗಡೆ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಠ್ಠಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಅಧ್ಯಕ್ಷ ಶ್ರೀಧರ್ ಶೆಟ್ಟಿ ವಹಿಸಿದ್ದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು, ಸದಸ್ಯ ಅರುಣ್ ವಿಟ್ಲ, ದ.ಕ. ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷೆ ಲಿಲ್ಲಿ ಪಾಯಸ್, ಬಂಟ್ವಾಳ ದೈಹಿಕ ಶಿಕ್ಷಣ ಪರಿವೀಕ್ಷಣಾ ಅಧಿಕಾರಿ ಶಿವಪ್ರಸಾದ್ ರೈ, ಎಡಪದವು ಸ್ವಾಮಿ ವಿವೇಕಾನಂದ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಪ್ರೇಮನಾಥ ಶೆಟ್ಟಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಯುವಜನ ಕ್ರೀಡಾ ಇಲಾಖೆಯ ತರಬೇತುದಾರ ರಘುನಾಥ ಬಿ. ಎಸ್., ಬಂಟ್ವಾಳ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಉಮನಾಥ ರೈ, ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ರಾಜೇಂದ್ರ ರೈ, ಉದ್ಯಮಿಗಳಾದ ರಾಧಾಕೃಷ್ಣ ನಾಯಕ್, ಬಾಬು ಕೆ. ವಿ., ರೋಟರಿ ಅಧ್ಯಕ್ಷ ಹರೀಶ್ ಪೂಜಾರಿ, ಲಯನ್ಸ್ ಅಧ್ಯಕ್ಷ ರಜಿತ್ ಆಳ್ವ, ಜೆಸಿಐ ಉಪಾಧ್ಯಕ್ಷ ರಿತೇಶ್ ಶೆಟ್ಟಿ, ಜಿಲ್ಲಾ ವೈಟ್ ಲಿಫ್ಟಿಂಗ್ ಅಸೋಸಿಯೇಶನ್ ಅಧ್ಯಕ್ಷ ಪ್ರವೀಣ್ ಕುಮಾರ್, ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ್, ವೈಟ್ ಲಿಫ್ಟಿಂಗ್ ಕೋಚ್ ಸರಸ್ವತಿ ಪುತ್ರನ್ ಉಪಸ್ಥಿತರಿದ್ದರು.

ವಿಠಲ್ ಜೀಸಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರಾಂಶುಪಾಲ ಜಯರಾಮ ರೈ ಡಿ. ಸ್ವಾಗತಿಸಿದರು. ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಭುವನೇಶ್ ಪ್ರಸ್ತಾವನೆಗೈದರು. ಶಾಲೆಯ ಆಡಳಿತಾಧಿಕಾರಿ ರಾಧಾಕೃಷ್ಣ ಎರುಂಬು ವಂದಿಸಿದರು. ಶಿಕ್ಷಕ ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

error: Content is protected !!