February 4, 2026

ಬಂಟ್ವಾಳ : ತಲವಾರು ದಾಳಿ ನಡೆದ ಅಮ್ಮೆಮ್ಮಾರ್‌ ಪ್ರದೇಶಕ್ಕೆ ಭೇಟಿ ನೀಡಿದ ಪಶ್ಚಿಮ ವಲಯ DIGP ಅಮಿತ್ ಸಿಂಗ್

0
image_editor_output_image-1823746532-1729879002334

ಬಂಟ್ವಾಳ :  ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಅಮ್ಮೆಮ್ಮಾರ್‌ ಎಂಬಲ್ಲಿ ನಡೆದ ಯುವಕರ ಕೊಲೆಯತ್ನ ಪ್ರಕರಣದ ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಪೊಲೀಸ್ ಉಪಮಹಾನಿರೀಕ್ಷಕರಾದ(DIGP)  ಅಮಿತ್ ಸಿಂಗ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲಾ ಪೊಲೀಸ್ ಅಧೀಕ್ಷಕರಾದ  ಯತೀಶ್ ಎನ್, ಮತ್ತಿತರ ಹಿರಿಯ ಅಧಿಕಾರಿಗಳೊಂದಿಗೆ ಘಟನೆಯ ಬಗ್ಗೆ ಪರಾಮರ್ಶೆ ನಡೆಸಿ ಮುಂದಿನ ತನಿಖೆಯ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು.

ತಡರಾತ್ರಿ ನಡೆದ ಈ ತಲವಾರು ದಾಳಿಯಲ್ಲಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್​ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು ಮಂಗಳೂರಿನ ಖಾಸಾಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದಾರೆ.

ಮನ್ಸೂರ್, ಪಲ್ಟಿ ಇಮ್ರಾನ್ ತಂಡದಿಂದ ದಾಳಿ ಈ ನಡೆದಿದ್ದು ಮುಸ್ತಾಕ ಯಾನೆ ಮಿಚ್ಚ, ಸರ್ಪುದ್ದೀನ್, ಅಶ್ರಫ್, ರಿಜ್ವಾನ್, ಸಫ್ವಾನ್, ಅದ್ನಾನ್, ನಿಸಾಕ್, ಯಾಸೀರ್, ಸುಹೈಲ್, ಜಾಹೀದ್, ಸಾದಿಕ್, ಲತೀಫ್ ದಾಳಿ ಮಾಡಿದ ಆರೋಪಿಗಳು ಎಂದು ಗುರುತ್ತಿಸಲಾಗಿದೆ.  ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತಲವಾರು ದಾಳಿ ನಡೆಸಿದ ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!