February 4, 2026

ಈಜಲು ಹೋದ ಹಾಸ್ಟೆಲ್ ವಿದ್ಯಾರ್ಥಿ ಸಾವು

0
image_editor_output_image1895103905-1729922821183.jpg

ಚಿಕ್ಕಬಳ್ಳಾಪುರ: ಕಲ್ಯಾಣಿಯಲ್ಲಿ ಈಜಲು ಹೋದ ಹಾಸ್ಟೆಲ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಹೊರವಲಯದ ಬಿಳಿಗಿರಿರಂಗನ ಕಲ್ಯಾಣಿಯಲ್ಲಿ ನಡೆದಿದೆ.

ಗುಡಿಬಂಟೆ ಪಟ್ಟಣದ ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು 17 ವರ್ಷದ ವೆಂಕಟಾಚಲಪತಿ ಮೃತ ವಿದ್ಯಾರ್ಥಿಯಾಗಿದ್ದಾನೆ. ಅಂದಹಾಗೆ ಮೂಲತಃ ಗೌರಿಬಿದನೂರು ತಾಲೂಕಿನ ಹೊಸೂರು ಹೋಬಳಿಯ ಭಕ್ತರಹಳ್ಳಿ ಗ್ರಾಮದವನಾಗಿದ್ದ ಮೃತ ವೆಂಕಟಾಚಲಪತಿ ಗುಡಿಬಂಡೆ ಪಟ್ಟಣದ ಸರ್ಕಾರಿ ಬಾಲಕರ ವಸತಿನಿಲಯದ ವಿದ್ಯಾರ್ಥಿಯಾಗಿದ್ದ.

Leave a Reply

Your email address will not be published. Required fields are marked *

error: Content is protected !!