February 4, 2026

ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣ: ಕಾರವಾರದ ಕಾಂಗ್ರೆಸ್ ಶಾಸಕನಿಗೆ 7 ವರ್ಷ ಜೈಲು ಶಿಕ್ಷೆ

0
image_editor_output_image-1972159423-1729940786628.jpg

ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರದ ಕಾಂಗ್ರೆಸ್ ಶಾಸಕ ಸೈಲ್ ಗೆ 7 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ.

ಪ್ರಕರಣದ ವಾದ-ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಕ್ಟೋಬರ್ 24 ರಂದು ಶಾಸಕ ಸತೀಶ್ ಸೈಲ್ ದೋಷಿ ಎಂದು ತೀರ್ಪು ನೀಡಿತ್ತು. ಇಂದು (ಅ.26) ಶಿಕ್ಷೆ ವಿಧಿಸಿದೆ.

ಕೇಸ್ನಲ್ಲಿ ದೋಷಿ ಆಗಿರುವ ಸತೀಶ್ ಸೈಲ್ ಪರವಾಗಿ ಹಿರಿಯ ವಕೀಲ ಮೂರ್ತಿ ಡಿ.ನಾಯ್ಕ್ ವಾದ ಮಂಡನೆ ಮಾಡಿದರು. ಸಿಬಿಐ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ.ಎಸ್ ಹೇಮಾ ಅವರು ವಾದ ಮಂಡನೆ ಮಾಡಿದರು. ಶಿಕ್ಷೆ ಪ್ರಕಟಣೆ ಮಾಡುವ ವೇಳೆ ಸತೀಶ್ ಸೈಲ್, ಮಹೇಶ್ ಬಿಳಿಯೆ ಅವರಿಗೆ ಜಡ್ಜ್ ಪ್ರಶ್ನೆ ಕೇಳಿದರು. ಎರಡು ಕಡೆಯ ವಾದ ಪತ್ರಿವಾದ ಆಲಿಸಿದ ಕೋರ್ಟ್ ಅಂತಿಮವಾಗಿ ಶಿಕ್ಷೆಯನ್ನು ಪ್ರಕಟಣೆ ಮಾಡಿದೆ.

Leave a Reply

Your email address will not be published. Required fields are marked *

error: Content is protected !!