February 4, 2026

ವಿಟ್ಲ: ರಾಜ್ಯಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆ: ದ.ಕ ಜಿಲ್ಲೆಗೆ ಸಮಗ್ರ ಪ್ರಶಸ್ತಿ

0
IMG-20241026-WA0003.jpg

ವಿಟ್ಲ: ವಿಠಲ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ರಾಜ್ಯಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವೈಟ್ ಲಿಫ್ಟಿಂಗ್ ಸ್ಪರ್ಧೆಯ ಸಮಾರೋಪ ಸಮಾರಂಭ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ವಿಠಲ ಜೇಸಿಸ್ ಎಜುಕೇಶನ್ ಸೊಸೈಟಿಯ ಉಪಾಧ್ಯಕ್ಷ ರಾಧಾಕೃಷ್ಣ ಪೈಯವರು ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ರಾಜ್ಯ ಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆಯು ಯಶಸ್ವಿಯಾಗಲು ಸಹಕರಿಸಿದ ದೈಹಿಕ ಶಿಕ್ಷಣ ಉಪನ್ಯಾಸಕರಾದ ಪ್ರೇಮಾನಾಥ ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕರಾದ ಸೇಸಪ್ಪ ಗೌಡ ಹಾಗೂ ಕರ್ನಾಟಕ ರಾಜ್ಯ ವೈಟ್ ಲಿಫ್ಟಿಂಗಿನ ಉಪಾಧ್ಯಕ್ಷ ಪುಷ್ಪರಾಜ್ ಹೆಗಡೆಯವರನ್ನು ಸನ್ಮಾನಿಸಲಾಯಿತು.

ಈ ಸ್ಪರ್ಧೆಯಲ್ಲಿ ಒಟ್ಟು 9 ಜಿಲ್ಲೆಗಳ 116 ಸ್ಪರ್ಧಿಗಳು ಭಾಗವಹಿಸಿದ್ದು ಬಾಲಕರ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಸಮಗ್ರ ತಂಡ ಪ್ರಶಸ್ತಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿತು.

ದ್ವಿತೀಯ ಸ್ಥಾನವನ್ನು ಬೆಳಗಾವಿ ಜಿಲ್ಲೆಯು ಪಡೆದುಕೊಂಡಿತು. ಬಾಲಕಿಯರ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಸಮಗ್ರ ತಂಡ ಪ್ರಶಸ್ತಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿತು ದ್ವಿತೀಯ ಸ್ಥಾನವನ್ನು ಬೆಳಗಾವಿ ಜಿಲ್ಲೆಯು ಪಡೆದುಕೊಂಡಿತು.

ವೇದಿಕೆಯಲ್ಲಿ ಪ್ರಭಾಕರ ಶೆಟ್ಟಿ ದಂಬೆ ಕಾನ ,ಮೋಹನ ಎ ,ಶ್ರೀ ಪ್ರಕಾಶ್ ಕುಕ್ಕಿಲ, ಶ್ರೀಧರ ಶೆಟ್ಟಿ, ಹಸನ್ ವಿಟ್ಲ, ಯೋಗೀಶ್, ಪ್ರಮೋದ್ ಕುಮಾರ್ ಭುವನೇಶ್, ರಾಜೇಂದ್ರ ರೈ ಉಪಸ್ಥಿತರಿದ್ದರು. ಶಾಲಾ ಪ್ರಾಂಶುಪಾಲರಾದ ಜಯರಾಮ ರೈ ಅವರು ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Leave a Reply

Your email address will not be published. Required fields are marked *

error: Content is protected !!