December 16, 2025

ಉಡುಪಿ: ಸಮುದ್ರಪಾಲಾಗಿದ್ದ ಇಬ್ಬರು ಯುವಕರ ಮೃತದೇಹ ಪತ್ತೆ

0
image_editor_output_image-1442178012-1730005746693

ಉಡುಪಿ: ಬೀಜಾಡಿ ಬೀಚ್‌ನಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಮುದ್ರಪಾಲಾಗಿರುವ ಘಟನೆ ನಿನ್ನೆ (ಅ.26) ಬೆಳಿಗ್ಗೆ ಸಂಭವಿಸಿತ್ತು.

ಘಟನೆಯಲ್ಲಿ ಓರ್ವನ ಮೃ*ತದೇಹ ನಿನ್ಪನೆ ತ್ತೆಯಾಗಿದ್ದು, ಇನ್ನೋರ್ವನಿಗಾಗಿ ಹುಡುಕಾಟ ನಡೆಯುತ್ತಿದ್ದು, ಈಗ ಅವನ ಮೃ*ತದೇಹವೂ ಪತ್ತೆಯಾಗಿದೆ.

ಬೆಂಗಳೂರು ದಾಸರಹಲ್ಳಿ ನಿವಾಸಿ ಸಂತೋಷ್ ಹಾಗೂ ಅಜಯ್ ಮೃ*ತ ದುರ್ದೈವಿಗಳು. ಜೊತೆಗೆ ಬಂದಿದ್ದ ಮೋಕ್ಷಿತ್ ಮತ್ತು ಶ್ರೀಯಾನ್ ಅಪಾಯದಿಂದ ಪಾರಾಗಿದ್ದಾರೆ.

ಸ್ನೇಹಿತನ ಅಕ್ಕನ ಮದುವೆ ಕಾರ್ಯಕ್ರಮಕ್ಕೆ ಇಬ್ಬರೂ ಬೆಂಗಳೂರಿನ ದಾಸರಹಳ್ಳಿಯಿಂದ ಕುಂದಾಪುರಕ್ಕೆ ಬಂದಿದ್ದು ಬೀಜಾಡಿ ಬೀಚ್ ಪಕ್ಕದ ರೆಸಾರ್ಟ್ ವೊಂದರಲ್ಲಿ ಉಳಿದುಕೊಂಡಿದ್ದರು ಎನ್ನಲಾಗಿದೆ. ಅದರಂತೆ ನಿನ್ನೆ (ಶನಿವಾರ) ಬೆಳಿಗ್ಗೆ ಇನ್ನಿಬ್ಬರು ಸ್ಥಳೀಯ ಸ್ನೇಹಿತರ ಜೊತೆ ಸಮುದ್ರದಲ್ಲಿ ಈಜಲು ತೆರಳಿದ ವೇಳೆ ಸಮುದ್ರಪಾಲಾಗಿದ್ದಾರೆ. ಈ ವೇಳೆ ಇಬ್ಬರು ಯುವಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕುಂದಾಪುರ ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಇಬ್ಬರ ಮೃತದೇಹಗಳು ಪತ್ತೆಯಾಗಿದೆ.

Leave a Reply

Your email address will not be published. Required fields are marked *

error: Content is protected !!