ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಜಿಲ್ಲಾ ಮ್ಯಾಜಿಸ್ಟ್ರೇಟ್ ಬಂಗಲೆಯ ಬಳಿ ಪತ್ತೆ
ಲಕ್ನೋ: ನಾಲ್ಕು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ, ವಿವಿಐಪಿ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಕಾನ್ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಬಂಗಲೆಯ ಬಳಿ ಮಹಿಳೆಯ ಶವ ಪತ್ತೆಯಾಗಿದೆ.
ಆರೋಪಿ ವಿಮಲ್ ಸೋನಿ, ಗ್ರೀನ್ ಪಾರ್ಕ್ ಪ್ರದೇಶದಲ್ಲಿ ಜಿಮ್ ತರಬೇತುದಾರನಾಗಿದ್ದಾನೆ. ಸರ್ಕಾರಿ ಅಧಿಕಾರಿಗಳಿಗೆ ಮಂಜೂರು ಮಾಡಿದ ಬಂಗಲೆಗಳನ್ನು ಒಳಗೊಂಡಿರುವ ಪ್ರದೇಶದಲ್ಲಿ ಉದ್ಯಮಿಯ ಪತ್ನಿಯ ಶವವನ್ನು ಹೂತಿಟ್ಟಿದ್ದಾಗಿ ಪೊಲೀಸರ ವಿಚಾರಣೆಯ ವೇಳೆ ತಪ್ಪೊಪ್ಪಿಕೊಂಡಿದ್ದಾನೆ.





