ಉಪ್ಪಿನಂಗಡಿ: ಬಜತ್ತೂರು ಗ್ರಾಮದ ಮಣಿಕ್ಕಳ ಪಾಲೆತ್ತಾಡಿ ನಿವಾಸಿ ರಾಮಣ್ಣ ಗೌಡ (69) ಅ.26 ರಂದು ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು.
ಪ್ರಗತಿಪರ ಕೃಷಿಕರಾಗಿರುವ ರಾಮಣ್ಣ ಗೌಡರು ಮಧ್ಯಾಹ್ನದವರೆಗೂ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದರು. ಹಠಾತ್ತನೆ ಎದೆನೋವು ಕಾಣಿಸಿಕೊಂಡಿದ್ದು, ಉಪ್ಪಿನಂಗಡಿ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮೃತಪಟ್ಟಿದ್ದರು.