February 4, 2026

ಕಡಬ: ಅಕ್ರಮ ಮರಳು ಸಾಗಣಿಕೆಯ ವಾಹನವನ್ನು ವಶಕ್ಕೆ ಪಡೆದ ಪೊಲೀಸರು

0
image_editor_output_image-1219281224-1730092066339.jpg

ಕಡಬ: ಅಕ್ರಮ ಮರಳು ಸಾಗಣಿಕೆ ಮಾಡುತ್ತಿದ್ದ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಕಡಬದಲ್ಲಿ ನಡೆದಿರುವುದು ತಿಳಿದು ಬಂದಿದೆ.

ಇಲ್ಲಿನ ಐತ್ತೂರು ಗ್ರಾಮದ ಮಾಯಿಪಾಜೆ ಎಂಬಲ್ಲಿ ಶನಿವಾರ ಕುಮಾರಧಾರಾ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿರುವ ಪೊಲೀಸರು ಮರಳು ಸಮೇತ ವಾಹನವನ್ನು ಪಡೆದುಕೊಂಡಿದ್ದಾರೆ.

ಖಚಿತ ಮಾಹಿತಿ ಆಧಾರದಲ್ಲಿ ದಾಳಿ ನಡೆಸಿರುವ ಪೊಲೀಸರು ಮರಳು ಸಾಗಾಟ ಮಾಡುತ್ತಿದ್ದ ಪಿಕಪ್‌ ವಾಹನವನ್ನು ವಶಪಡಿಸಿಕೊಂಡು ಗಣಿ ಇಲಾಖೆಗೆ ಪ್ರಕರಣವನ್ನು ಹಸ್ತಾಂತರಿಸಿದ್ದಾರೆ.

ಈ ಪಿಕಪ್‌ ವಾಹನ ಸ್ಥಳೀಯ ಅಜಯ್‌ ಎಂಬವರಿಗೆ ಸೇರಿದ್ದಾಗಿದೆ ಎಂದು ಕಡಬ ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!