ಯೂಟ್ಯೂಬ್ ಚಾನಲ್‌ನಲ್ಲಿ ಸಕ್ರಿಯವಾಗಿದ್ದ ದಂಪತಿ ಮನೆಯಲ್ಲಿ ಶವವಾಗಿ ಪತ್ತೆ
ತಿರುವನಂತಪುರಂ: ಯೂಟ್ಯೂಬ್ ಚಾನಲ್‌ನಲ್ಲಿ ಸಕ್ರಿಯವಾಗಿದ್ದ ದಂಪತಿ ಭಾನುವಾರ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ಕೇರಳದ ಪರಸ್ಸಾಲ ಪಟ್ಟಣದಲ್ಲಿ ನಡೆದಿದೆ.
ಸೆಲ್ವರಾಜ್ (45), ಪ್ರಿಯಾ (40) ಶವವಾಗಿ ಪತ್ತೆಯಾದ ದಂಪತಿ. ಎರಡು ದಿನಗಳಿಂದ ಮನೆಯಿಂದ ಆಚೆ ಬಾರದ ಕಾರಣ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕಾಗಮಿಸಿದ ಪೊಲೀಸರು ಬಾಗಿಲು ತೆಗೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸೆಲ್ವರಾಜ್ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರಿಯಾ ಮೃತದೇಹ ಹಾಸಿಗೆ ಮೇಲೆ ಪತ್ತೆಯಾಗಿದೆ ಎಂದು ಪರಸ್ಸಾಲ ಪೊಲೀಸರು ತಿಳಿಸಿದ್ದಾರೆ.