February 4, 2026

State Bankನಲ್ಲಿ ಕಳ್ಳತನ: ಲಾಕರ್‌ನಲ್ಲಿದ್ದ ನಗದು, ಚಿನ್ನಾಭರಣ ಕಳವು

0
image_editor_output_image1898131131-1730108470425.jpg

ದಾವಣಗೆರೆ: ಬ್ಯಾಂಕ್‌ನ ಕಿಟಕಿ ಸರಳುಗಳನ್ನು ಮುರಿದು ಲಾಕರ್‌ನಲ್ಲಿದ್ದ ನಗದು ಹಾಗೂ ಚಿನ್ನಾಭರಣವನ್ನು ಕಳ್ಳರು ಹೊತ್ತೊಯ್ದ ಘಟನೆ ನ್ಯಾಮತಿ ಪಟ್ಟಣದಲ್ಲಿ ನಡೆದಿದೆ.

ನಗರದ ನೆಹರು ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank of India) ಶಾಖೆಯಲ್ಲಿ ಎರಡು ದಿನಗಳ ಹಿಂದೆ ಕಳ್ಳರು ಈ ಕೃತ್ಯ ಎಸಗಿರುವ ಬಗ್ಗೆ ನ್ಯಾಮತಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಶನಿವಾರ ಹಾಗು ಭಾನುವಾರ ಎರಡು ದಿನ ಬ್ಯಾಂಕ್ ರಜೆ ಇದ್ದ ಕಾರಣ ಶುಕ್ರವಾರ ರಾತ್ರಿ ಕಳ್ಳರು ಈ ಕೃತ್ಯ ಎಸಗಿದ್ದಾರೆ. ಕಿಟಕಿಯ ಸರಳುಗಳನ್ನು ಮುರಿದು ಬ್ಯಾಂಕ್‌ಗೆ ನುಗ್ಗಿರುವ ಕಳ್ಳರು ಲಾಕರ್ ಒಡೆದು ಅದರಲ್ಲಿಟ್ಟಿದ್ದ ಚಿನ್ನಾಭರಣ ಹಾಗೂ ಹಣ ದೋಚಿದ್ದಾರೆ. ಇಷ್ಟೇ ಅಲ್ಲದೇ ಸಿಸಿಟಿವಿ ಕ್ಯಾಮೆರಾದ ಡಿವಿಆರ್ ಸಮೇತ ಪರಾರಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!