ಕೊಕ್ಕಡ: ಮನೆಗೆ ಆಕಸ್ಮಿಕವಾಗಿ ಬೆಂಕಿ: ಅಡಿಕೆ, ರಬ್ಬರ್, ಇನ್ನಿತರ ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
ಕೊಕ್ಕಡ: ಮನೆಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಕಳಂಜ ಗ್ರಾಮದ ಮೂಡಾಯಿಮಜಲು ಬಳಿ ಅ.28ರಂದು ಸಂಜೆ ನಡೆದಿದೆ.
ಸೇಸಪ್ಪ ಗೌಡರ ಮನೆ ಎಮದು ಗುರುತಿಸಲಾಗಿದೆ. ಆಕಸ್ಮಿಕವಾಗಿ ಬೆಂಕಿತಗುಲಿ ಮನೆಯಲ್ಲಿದ್ದ ಅಡಿಕೆ, ರಬ್ಬರ್ ಮತ್ತು ಇನ್ನಿತರ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿದೆ.
ಅದೃಷ್ಟವಶಾತ್ ಆ ಸಂಧರ್ಭ ಮನೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ . ಆದರೆ, ಬೆಂಕಿ ಹೊತ್ತಿಕೊಳ್ಳಲು ಕಾರಣ ಏನೆಂದು ಇನ್ನಷ್ಟೇ ತಿಳಿಯಬೇಕಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.





