May 5, 2026

ಕೈ ಕೊಟ್ಟ ಪ್ರೀತಿಸಿದ ಹುಡುಗಿ: ಡೆತ್ ನೋಟ್ ಬರೆದಿಟ್ಟು ಪ್ರಿಯಕರ ನೇಣು ಬಿಗಿದು ಆತ್ಮಹತ್ಯೆ

0
image_editor_output_image-447274946-1730184854906.jpg

ಕಲಬುರಗಿ: 13 ವರ್ಷ ಪ್ರೀತಿಸಿದ ಹುಡುಗಿ ಕೈ ಕೊಟ್ಟು ಮತ್ತೊಬ್ಬನ ಜೊತೆ ಮದುವೆಯಾದ ಕಾರಣಕ್ಕೆ ಡೆತ್ ನೋಟ್ ಬರೆದಿಟ್ಟು ಪ್ರಿಯಕರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮಡಕಿ ಗ್ರಾಮದಲ್ಲಿ ನಡೆದಿದೆ.

ದೇವೇಂದ್ರಪ್ಪ ಕಲಕೇರಿ (32) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಡಕಿ ಗ್ರಾಮದ ಯುವತಿಯೋರ್ವಳನ್ನು ದೇವೇಂದ್ರಪ್ಪ ಪ್ರೀತಿಸಿದ್ದ. ಕಳೆದ ನಾಲ್ಕು ವರ್ಷದ ಹಿಂದೆ ಬೇರೊಬ್ಬನೊಂದಿಗೆ ಯುವತಿ ಮದುವೆಯಾಗಿ ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ಚಿಕ್ಕಪ್ಪ ಹಾಗೂ ಗಂಡನ ಜೊತೆ ವಾಸವಾಗಿದ್ದಳು.

ಆಗಾಗ ದೇವೇಂದ್ರನಿಗೆ ಫೋನ್ ಮಾಡಿ ತನ್ನನ್ನು ಮದುವೆ ಆಗದೆ ಹೋದರೆ ಜೀವ ಕಳೆದುಕೊಳ್ಳುವುದಾಗಿ ದುಂಬಾಲು ಬೀಳುತ್ತಿದ್ದಳು ಎಂದು ದೇವೇಂದ್ರಪ್ಪ ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾನೆ

Leave a Reply

Your email address will not be published. Required fields are marked *

error: Content is protected !!