February 4, 2026

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ ಹೊಡೆದು ಹಿರಿಯ ಕಾರು ಚಾಲಕ ಮೃತ್ಯು

0
image_editor_output_image816213049-1730214697188

ಬಂಟ್ವಾಳ: ರಸ್ತೆ ದಾಟುವ ವೇಳೆ ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದ ಹಿರಿಯ ಕಾರು ಚಾಲಕರೋರ್ವರು ಉಸಿರಾಟದ ತೊಂದರೆಯಿಂದ ಮೃತಪಟ್ಟ ಘಟನೆ ಮಂಗಳವಾರ ತುಂಬೆಯಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಕಂಜತ್ತೂರು ನಿವಾಸಿ ಅಂಬಾಸಿಡರ್ ಕಾರು ಚಾಲಕ ಬೋಜ ಮೂಲ್ಯ (62) ಮೃತಪಟ್ಟ ವ್ಯಕ್ತಿ.

ಅ.11 ರಂದು ರಾತ್ರಿ 7 ರ ಸುಮಾರಿಗೆ ಬೋಜ ಮೂಲ್ಯ ಅವರು ಮನೆಗೆ ಕೋಳಿ ಮಾಂಸ ಖರೀದಿ ಮಾಡಲು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕಾರು ನಿಲ್ಲಿಸಿ ತಲಪಾಡಿಯ ಚಿಕನ್ ಸ್ಟಾಲ್ ಗೆ ತೆರಳಲು ರಸ್ತೆ ದಾಟುವ ವೇಳೆ ಬೈಕ್ ಡಿಕ್ಕಿಯಾಗಿತ್ತು. ಘಟನೆಯಲ್ಲಿ ಅವರಿಗೆ ಕಾಲಿಗೆ ಗಾಯವಾಗಿದ್ದು, ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅ. 12 ರಂದು ಅಪಘಾತದ ಬಗ್ಗೆ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಅಪಘಾತವಾದ 7 ದಿನಗಳ ಬಳಿಕ ಬೋಜ ಮೂಲ್ಯ ಅವರು ಆಸ್ಪತ್ರೆಯಿಂದ ಡಿಸ್ ಚಾರ್ಜ್ ಗೊಂಡು ಮನೆಗೆ ತೆರಳಿದ್ದರು. ಇದೀಗ 19 ದಿನಗಳ ಬಳಿಕ ಮನೆಯಲ್ಲಿ ಇವರಿಗೆ ಉಸಿರಾಟದ ತೊಂದರೆ ಕಂಡುಬಂದಿದ್ದು ಇವರನ್ನು ಕೂಡಲೇ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಮೃತಪಟ್ಟಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿದೆ.

ಅಪಘಾತ ಪ್ರಕರಣದ ಬಗ್ಗೆ ಈಗಾಗಲೇ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಎಸ್.ಐ.ಸುತೇಶ್ ಅವರು ಮರಣೋತ್ತರ ಪರೀಕ್ಷೆ ವೇಳೆ ಹಾಜರಿದ್ದರು.

ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಬೋಜ ಮೂಲ್ಯ ಅವರು ಸುಮಾರು 42 ವರ್ಷಗಳ ಕಾಲ ಅಂಬಾಸಿಡರ್ ಕಾರು ಚಾಲಕರಾಗಿ ಸೇವೆ ಸಲ್ಲಿಸಿದ್ದಾರೆ. ಬಿಸಿರೋಡಿನ ಆಸುಪಾಸಿನಲ್ಲಿ ಬೋಜಣ್ಣ

Leave a Reply

Your email address will not be published. Required fields are marked *

error: Content is protected !!