ರೇಣುಕಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್‌ಗೆ ಮಧ್ಯಂತರ ಜಾಮೀನು
ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನಟ ದರ್ಶನ್‌ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿದೆ.
ಒಂದು ವಾರದಲ್ಲಿ ಚಿಕಿತ್ಸೆಯ ವಿವರವನ್ನು ಕೋರ್ಟ್‌ಗೆ ನೀಡಬೇಕು.ಕೋರ್ಟ್‌ಗೆ ಪಾಸ್‌ಪೋರ್ಟ್ ಒಪ್ಪಿಸಬೇಕು. ದರ್ಶನ ಇಚ್ಛಿಸಿದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು ಎಂದು ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ತೀರ್ಪಿನಲ್ಲಿ ತಿಳಿಸಿದೆ.
ದರ್ಶನ್ ಬೆನ್ನುನೋವಿನಿಂದ ಬಳಲುತ್ತಿದ್ದಾರೆ. ಬೆನ್ನುಹುರಿ ನೋವಿಗೆ ಪರಿಹಾರ ಪಡೆಯಲು ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಂಡಬೇಕೆಂದು ಕೋರಿ ಸೆಷನ್ಸ್ ಕೋರ್ಟ್ ಮೊರೆ ಹೋಗಿದ್ದರು. ಆದರೆ ಅಲ್ಲಿ ಜಾಮೀನು ತಿರಸ್ಕೃತಗೊಂಡ ಪರಿಣಾಮ ಹೈಕೋರ್ಟ್ ಮೆಟ್ಟಿಲೇರಿದ್ದರು.