ಬದಿಯಡ್ಕ: ಸಚಿತಾ ರೈ ವಿರುದ್ಧ ಮತ್ತೆರಡು FIR ದಾಖಲು
ಬದಿಯಡ್ಕ: ಸರಕಾರಿ ಉದ್ಯೋಗ ದೊರಕಿಸಿಕೊಡುವುದಾಗಿ ಭರವಸೆ ನೀಡಿ ಲಕ್ಷಾಂತರ ರೂ. ನೀಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಶೇಣಿ ಬಲ್ತಕಲ್ಲು ನಿವಾಸಿ ಸಚಿತಾ ರೈ (27) ವಿರುದ್ಧ ಪೊಲೀಸರು ಮತ್ತೆರಡು ಕೇಸು ದಾಖಲಿಸಿದ್ದಾರೆ.
ಪೆರ್ಲ ಬೆದ್ರಂಪಳ್ಳದ ಸಂದೀಪ್ (28) ಮತ್ತು ಎಣ್ಮಕಜೆಯ ನಯನಾ ಕುಮಾರಿ (34) ನೀಡಿದ ದೂರಿನಂತೆ ಬದಿಯಡ್ಕ ಪೊಲೀಸರು ಕೇಸು ದಾಖಲಿಸಿದ್ದಾರೆ. ಕರ್ನಾಟಕದ ಲೋಕೋಪಯೋಗಿ ಇಲಾಖೆಯ ನೀರಾವರಿ ವಿಭಾಗ ಅಥವಾ ಪೆಟ್ರೋಲಿಯಂ ಕಂಪೆನಿಯಲ್ಲಿ ಕೆಲಸ ಮಾಡಿಸಿಕೊಡುವುದಾಗಿ ಹೇಳಿ ಬೆದ್ರಂಪಳ್ಳದ ಸಂದೀಪ್ ಅವರಿಂದ 12,83,500 ರೂ. ಪಡೆದು ವಂಚಿಸಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ.