ವಿಟ್ಲ: ಜನಸಾಮಾನ್ಯರ ನಿದ್ದೆಗೆಡಿಸಿದ್ದ ಅನಿಲ ಸಿಲಿಂಡರ್ ಕಳವು ಪ್ರಕರಣ ಪತ್ತೆ ಹಚ್ಚಿದ ವಿಟ್ಲ ಪೊಲೀಸರು: ಉಳ್ಳಾಲದ ಇಬ್ಬರು ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರ ತಂಡ
ವಿಟ್ಲ: ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಮತ್ತು ಇನ್ನಿತರ ಸಾಮಾಗ್ರಿಗಳನ್ನು ಕಳವುಗೈದ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳವು ಪ್ರಕರಣಗಳ ಪತ್ತೆಯಲ್ಲಿ ತೊಡಗಿದ್ದ ವಿಟ್ಲ ಠಾಣಾ ಅಪರಾದ ತಂಡದ ಸಿಬ್ಬಂದಿಗಳು ದಿನಾಂಕ:29.10.2024 ರಂದು ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಮಾಣಿ ಜಂಕ್ಷನ್ ನಲ್ಲಿ ಇಬ್ಬರು ಕಳ್ಳರನ್ನು ಬಂಧಿಸಿದ್ದು, ವಿಚಾರಿಸಲಾಗಿ ವಿಟ್ಲ ಠಾಣೆಯ ಮಿತ್ತೂರು, ಕೊಡಾಜೆ ಮನೆ ಕಳವು ಎರಡು ಪ್ರಕರಣಗಳಲ್ಲಿ ಹಾಗೂ ಪುತ್ತೂರು ನಗರ ಠಾಣಾ ವ್ಯಾಪ್ತಿಯ ಶಾಲೆ ಹಾಗೂ ಅಂಗನವಾಡಿ ಕಳವು ಎರಡು ಪ್ರಕರಣಗಳಲ್ಲಿ ಬಾಗಿಯಾಗಿವುದು ಪತ್ತೆಯಾಗಿರುತ್ತದೆ.
ಉಳ್ಳಾಲದ ಬೋಳಿಯಾರ್ ಧರ್ಮ ನಗರ ನಿವಾಸಿ ಮಹಮ್ಮದ್ ರಿಯಾಜ್ ಹಸನಬ್ಬ @ರಿಯಾಜ್(38) ಮತ್ತು ಉಳ್ಳಾಲದ ಹಳೆಕೋಟೆ ನಿವಾಸಿ ಮೊಹಮ್ಮದ್ ಇಂತಿಯಾಜ್(38 ) ಬಂಧಿತ ಆರೋಪಿಗಳು.
1ನೇ ಆರೋಪಿ ಮಹಮ್ಮದ್ ರಿಯಾಜ್ ಹಸನಬ್ಬ ಎಂಬಾತನ ವಿರುದ್ದ ಕೇರಳ ರಾಜ್ಯದ ಕುಂಬಳೆ ಹಾಗೂ ಮಂಗಳೂರು ನಗರ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿರುತ್ತವೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ರೂ 1,35,000/–ರೂ ಮೌಲ್ಯದ ಗ್ಯಾಸ್ ಸಿಲಿಂಡರ್ ಹಾಗೂ ಮನೆ ಸಾಮಗ್ರಿಗಳು ಹಾಗೂ ಕಳ್ಳತನಕ್ಕೆ ಉಪಯೋಗಿಸಿದ KA-19-AD-0585 ನೊಂದಣಿ ನಂಬ್ರದ ಅಟೊ ರಿಕ್ಷಾ -01 ಇದರ ಅಂದಾಜು ಮೌಲ್ಯ 1,50,000/- ರೂ ಆಗಿದ್ದು, ಇವುಗಳನ್ನು ವಶಪಡಿಸಿಕೊಳ್ಳಲಾಗಿದೆ. ಸ್ವಾದೀನಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ- 2,85,000/- ರೂ ಆಗಬಹುದು.
ಸದ್ರಿ ಆರೋಪಿ ಪತ್ತೆಯ ಕಾರ್ಯಾಚರಣೆಯನ್ನು ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಮಾನ್ಯ ಶ್ರೀ ಯತೀಶ್ ಎನ್ ಐ.ಪಿ.ಎಸ್ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ರಾಜೇಂದ್ರ ಡಿ ಎಸ್ ರವರ ಮಾರ್ಗದರ್ಶನದಂತೆ ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಎಸ್. ವಿಜಯ ಪ್ರಸಾದ್ ರವರ ನಿರ್ದೇಶನದಂತೆ, ವಿಟ್ಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಶ್ರೀ ನಾಗರಾಜ್ ಹೆಚ್ ಈ ರವರ ನೇತೃತ್ವದಲ್ಲಿ ಪೊಲೀಸ್ ಉಪ ನಿರೀಕ್ಷಕರಾದ ವಿದ್ಯಾ ಕೆ.ಜೆ. ರತ್ನಕುಮಾರ್, ಕೌಶಿಕ್ ಸಿಬ್ಬಂಧಿಗಳಾದ ಉದಯ ರೈ, ರಾಧಾಕೃಷ್ಣ, ರಕ್ಷೀತ್ ರೈ, ಶ್ರೀಧರ ಸಿ ಎಸ್, ಕೃಷ್ಣ ನಾಯ್ಕ್, ಗದಿಗೆಪ್ಪ ಕಲ್ಲೂರ, ಶಂಕರ ಶಂಶಿ, ಮನೋಜ್, ಸತೀಶ್, ಗಣಕಯಂತ್ರ ವಿಭಾಗದ ಸಂಪತ್, ದಿವಾಕರ್ ಭಾಗವಹಿಸಿರುತ್ತಾರೆ.