ಮಂಗಳೂರು: ಯುವ ಉದ್ಯಮಿ ಸುಧಾಕರ ಆಳ್ವ ತೋಟದ ಕೆರೆಗೆ ಬಿದ್ದು ಮೃತ್ಯು
ಮಂಗಳೂರು: ಯುವ ಉದ್ಯಮಿ, ಮೋರ್ಲ ಕಂಬಳ ಕೋಣದ ಯಜಮಾನ ಸುಧಾಕರ ಆಳ್ವ ಮೋರ್ಲ ಕಂಬಳಕೋಡಿ (45) ಅವರು ಆಕಸ್ಮಿಕವಾಗಿ ತಮ್ಮ ಮನೆಯ ತೋಟದ ಕೆರೆಗೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.
ಉದ್ಯಮಿಯಾಗಿ ಗುರುತಿಸಿಕೊಂಡಿದ್ದ ಸುಧಾಕರ ಆಳ್ವ ಅವರು ಮಂಗಳವಾರ ಬೆಳಗ್ಗೆ 11 ಗಂಟೆಯಿಂದ ನಾಪತ್ತೆಯಾಗಿದ್ದು ಮನೆ ಮಂದಿ ಹಾಗೂ ಸ್ಥಳೀಯರು ಸುತ್ತ ಮುತ್ತ ಹುಡುಕಾಟ ನಡೆಸಿದ್ದು ಮನೆಯ ಪಕ್ಕದ ಕೆರೆಯ ಬದಿಯಲ್ಲಿ ಮೃತದೇಹ ಕಂಡು ಬಂದಿದೆ.
ಪಂಪ್ ಸ್ವಿಚ್ ಹಾಕಲು ಬಂದಾಗ ಕಾಲು ಜಾರಿ ಬಿದ್ದು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.




