March 18, 2026

ಕುಂದಾಪುರ: ಮಣ್ಣು ತುಂಬಿದ್ದ ಲಾರಿ ದ್ವಿಚಕ್ರ ವಾಹನದ ಮೇಲೆ ಪಲ್ಟಿ

0
image_editor_output_image-1251304026-1730350673348.jpg

ಕುಂದಾಪುರ: ಮಣ್ಣು ತುಂಬಿದ ಮಿನಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಇದೆ ವೇಳೆ ಎದುರಿನಿಂದ ಸ್ಕೂಟಿ ಚಲಾಯಿಸಿಕೊಂಡು ಬರುತ್ತಿದ್ದ ಮಹಿಳೆಯು ವಾಹನ ಸಹಿತ ಲಾರಿಯಿಂದ ಬಿದ್ದ ಮಣ್ಣಿನಡಿ ಸಿಲುಕಿಕೊಂಡ ಘಟನೆ ಕಿರಿಮಂಜೇಶ್ವರ ಗ್ರಾಮದ ನಾಗೂರು – ಉಪ್ಪಳ್ಳಿ ರಸ್ತೆಯಲ್ಲಿನ ತಿರುವಿನಲ್ಲಿ ಬುಧವಾರ ನಡೆದಿದೆ.

ಮಣ್ಣಿನಲ್ಲಿ ಸಿಲುಕಿಕೊಂಡಿದ್ದ ಮಹಿಳೆ ಆರತಿ ಶೆಟ್ಟಿ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೇರೂರು ಕಡೆಯಿಂದ ನಾಗೂರಿಗೆ ತೆರಳುತ್ತಿದ್ದ ಮಣ್ಣು ತುಂಬಿದ ಮಿನಿ ಲಾರಿಯೊಂದು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿದೆ.

ಇದೇ ವೇಳೆ ನಾಗೂರಿನಿಂದ ನೂಜಾಡಿಗೆ ತೆರಳುತ್ತಿದ್ದ ಮಹಿಳೆಯ ಮೇಲೆ ಲಾರಿಯಲ್ಲಿದ್ದ ಮಣ್ಣು ಬಿದ್ದಿದೆ. ಲಾರಿ ಬೀಳುವ ವೇಳೆ ಸ್ಕೂಟಿಯನ್ನು ಸಾಕಷ್ಟು ಎಡಬದಿಗೇ ತಿರುಗಿಸಿದ್ದರಿಂದ ಲಾರಿ ಮೈಮೇಲೆ ಬಿಳುವ ದೊಡ್ಡ ಅಪಾಯದಿಂದ ಮಹಿಳೆ ಪಾರಾದರು.

Leave a Reply

Your email address will not be published. Required fields are marked *

error: Content is protected !!