ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿ
ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರೊಂದು ಪಲ್ಟಿಯಾದ ಪರಿಣಾಮ ಚಾಲಕನಿಗೆ ಗಾಯಗಳಾಗಿದ್ದು ಟ್ಯಾಂಕರ್ ನಿಂದ ಪೆಟ್ರೋಲ್ – ಡಿಸೇಲ್ ಸೋರಿಕೆಯಾಗುತ್ತಿರುವ ಘಟನೆ ಚಾರ್ಮಾಡಿ ಘಾಟ್ ನಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.
ಮಂಗಳೂರಿನಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಪರಿಣಾಮ ಚಾಲಕ ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಟ್ಯಾಂಕರ್ ಪಲ್ಟಿಯಾದ ಪರಿಣಾಮ ಪೆಟ್ರೋಲ್ – ಡಿಸೇಲ್ ಸೋರಿಕೆಯಾಗುತ್ತಿದೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.





