5 ಲಕ್ಷ ರೂ. ಮೌಲ್ಯದ ಅಕ್ರಮ ಗೋವಾ ಮದ್ಯ ವಶಕ್ಕೆ

ಬೆಂಗಳೂರು: ನಗರದಲ್ಲಿ 5 ಲಕ್ಷ ರೂ. ಮೌಲ್ಯದ ಅಕ್ರಮ ಗೋವಾ ಮದ್ಯ ದಾಸ್ತಾನು ಮಾಡಿಟ್ಟಿದ್ದ ಆರೋಪಿಯನ್ನು ಅಬಕಾರಿ ಅಧಿಕಾರಿಗಳು ಬಂಧಿಸಿರುವಂತಹ ಘಟನೆ ಕತ್ರಿಗುಪ್ಪೆಯಲ್ಲಿ ನಡೆದಿದೆ.
ದಕ್ಷಿಣ ವಿಭಾಗದ ಅಬಕಾರಿ ಜಂಟಿ ಆಯುಕ್ತರ ನೇತೃತ್ವದಲ್ಲಿ ಆರೋಪಿ ಪುರುಷೋತ್ತಮ್ ಮನೆ ಮೇಲೆ ರೇಡ್ ಮಾಡಿ ಬಂಧಿಸಲಾಗಿದೆ. ಮನೆಯಲ್ಲಿದ್ದ ಮದ್ಯದ ಬಾಟಲಿ ನೋಡಿ ಒಂದು ಕ್ಷಣ ಅಬಕಾರಿ ಅಧಿಕಾರಿಗಳೇ ಶಾಕ್ ಆಗಿದ್ದಾರೆ.
ಸದ್ಯ ಅಬಕಾರಿ ಕಾಯ್ದೆ 1965ರ ಕಲಂ 11, 14, 15, 38(ಎ) ಹಾಗೂ 43(ಎ) ಅಡಿ ಕೇಸ್ ದಾಖಲಿಸಲಾಗಿದ್ದು, 144 ಬಾಟಲ್ಗಳನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.