ಕುಟುಂಬ ಸದಸ್ಯರು ಇರುವಾಗಲೇ ಇಂಗ್ಲೆಂಡ್ ಕ್ರಿಕೆಟ್ ತಂಡದ ನಾಯಕನ ಮನೆಯಲ್ಲಿ ದರೋಡೆ
ಲಂಡನ್: ಕುಟುಂಬ ಸದಸ್ಯರು ಮನೆಯಲ್ಲಿದ್ದಾಗಲೇ ಮುಸುಕುಧಾರಿ ದರೋಡೆಕೋರರು ಮನೆಗೆ ನುಗ್ಗಿ ತಮ್ಮ ಮನೆಯನ್ನು ದರೋಡೆ ಮಾಡಿದ್ದಾರೆ ಎಂದು ಇಂಗ್ಲೆಂಡ್ ಕ್ರಿಕೆಟ್ ತಂಡದ ನಾಯಕ ಬೆನ್ ಸ್ಟ್ರೋಕ್ ಹೇಳಿದ್ದಾರೆ.
ಕುಟುಂಬಕ್ಕೆ ಯಾವುದೇ ದೈಹಿಕ ಹಾನಿಯಾಗಿಲ್ಲ. ಆದರೆ ಅಸಂಖ್ಯಾತ ಭಾವನಾತ್ಮಕ ವಸ್ತುಗಳನ್ನು ದರೋಡೆ ಮಾಡಲಾಗಿದೆ ಎಂದು ಬೆನ್ ಸ್ಟೋಕ್ಸ್ ತಿಳಿಸಿದ್ದಾರೆ.
ಹಲವು ಮಂದಿ ಮುಸುಕುಧಾರಿಗಳು ಕ್ಯಾಸಲ್ ಈಡನ್ ನಲ್ಲಿರುವ ನಮ್ಮ ಮನೆಗೆ ನುಗ್ಗಿ ದರೋಡೆ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣ ಪೋಸ್ಟ್ ನಲ್ಲಿ ವಿವರಿಸಿದ್ದಾರೆ.