ಉಳ್ಳಾಲ : ಗಾಂಜಾ ಮಾರಾಟ ಮಾಡುತ್ತಿದ್ದ ದಂಪತಿಯ ಬಂಧನ

ಉಳ್ಳಾಲ : ಗಾಂಜಾ ಮಾರಾಟ ಮಾಡುತ್ತಿದ್ದ ದಂಪತಿಯನ್ನು ಬಂಧಿಸಿದ ಘಟನೆ ಕಿನ್ಯ ಗ್ರಾಮದ ರಹ್ಮತ್ ನಗರದ ಎಲ್ಲ್ ಪಡ್ಪು ಎಂಬಲ್ಲಿ ನಡೆದಿದೆ.
ನಝೀರ್ ಹಾಗೂ ಆತನ ಪತ್ನಿ ಅಸ್ಮ ಬಂಧಿತರು. ಅವರು ಕಾರಿನಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಗಳಿಂದ 6.800 ಕೆಜಿ ಗಾಂಜಾ ಹಾಗೂ ಕಾರನ್ನು ಉಳ್ಳಾಲ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ದಂಪತಿ ಮನೆ ಮತ್ತು ಕಾರಿನಲ್ಲಿ ಗಾಂಜಾವನ್ನು ಶೇಖರಿಸಿ ಇಟ್ಟು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಬಂಧಿತರು ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ. ಪೊಲೀಸರು ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ 10 ಲಕ್ಷ ರೂ.ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.