ಉಳ್ಳಾಲ: ಬಾಡಿಗೆ ಮನೆಯಲ್ಲಿ ಗಾಂಜಾ ಮಾರಾಟ: 8 ಕೆಜಿ ಗಾಂಜಾ ವಶಕ್ಕೆ, ಇಬ್ಬರು ಆರೋಪಿಗಳ ಬಂಧನ

ಉಳ್ಳಾಲ: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ಯಾ ರೆಹಮತ್ ನಗರ ಕಜೆ ಬಾಕಿಮಾರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ಗಾಂಜಾ ಮಾರಾಟ ನಡೆಸುತ್ತಿದ್ದ ಜೋಡಿಯನ್ನು ಮಂಗಳೂರು ನಗರ ದಕ್ಷಿಣ ಉಪವಿಭಾಗದ ಆ್ಯಂಟಿ ಡ್ರಗ್ ಟೀಂ ನೇತೃತ್ವದ ಪೊಲೀಸ್ 2,04,000 ಮೌಲ್ಯದ 8 ಕೆ ಜಿ ಗಾಂಜಾ ವಶಪಡಿಸಿಕೊಂಡಿದೆ.
ಮಾಡೂರು ನಿವಾಸಿ ನಜೀರ್ ಹುಸೈನ್ (50) ಮತ್ತು ಕಿನ್ಯಾ ರೆಹಮತ್ ನಗರದ ಅಫ್ಘಾತ್ (37) ಬಂಧಿತ ಆರೋಪಿಗಳು.
ಖಚಿತ ಮಾಹಿತಿ ಮೇರೆಗೆ ಪೋಲಿಸರ ತಂಡ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದು ಗಾಂಜಾ ಸಹಿತ ಮಾರಾಟಕ್ಕೆ ಬಳಸಿದ್ದ ಕಾರು ಮತ್ತು ಎರಡು ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ.